ಮಂಗಳೂರು: ಕೊಲ್ಲೂರು ದೇವಸ್ಥಾನಕ್ಕೆ ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತೆರಳಬೇಕಿದ್ದ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ್ಸಿಂಗೆ ಅವರು, ಮಳೆಯ ಹಿನ್ನೆಲೆ ರಸ್ತೆ ಮೂಲಕ ಪ್ರಯಾಣ ಬೆಳೆಸಿದ್ದಾರೆ.
ಇಂದು ಉಡುಪಿ ಜಿಲ್ಲೆಯ ಕೊಲ್ಲೂರು ದೇವಸ್ಥಾನಕ್ಕೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ನಿಗದಿಯಂತೆ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ನಲ್ಲಿ ತೆರಳಬೇಕಿತ್ತು. ಆದರೆ ತೀವ್ರ ಮಳೆಯ ಹಿನ್ನೆಲೆ, ರಸ್ತೆ ಮೂಲಕ ಕೊಲ್ಲೂರಿಗೆ ತೆರಳಿದ್ದಾರೆ.
ಶ್ರೀಲಂಕಾ ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ರಸ್ತೆಯುದ್ದಕ್ಕೂ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.