ETV Bharat / state

ಬಿಲ್ಲವ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ಪಾದಯಾತ್ರೆ: ಪ್ರಣವಾನಂದ ಸ್ವಾಮೀಜಿ

ಬಿಲ್ಲವ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗುತ್ತಿದೆ, ಎರಡು ಸಚಿವರಿದ್ದರೂ ಸಮುದಾಯಕ್ಕೆ ಏನೂ ಲಾಭವಿಲ್ಲ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಶ್ರೀಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

Kn_mng_
ಪ್ರಣವಾನಂದ ಸ್ವಾಮೀಜಿ
author img

By

Published : Oct 29, 2022, 6:26 PM IST

ಬಂಟ್ವಾಳ/ಮಂಗಳೂರು: ರಾಜ್ಯದಲ್ಲಿ ಸುಮಾರು 70 ಲಕ್ಷ ಜನಸಂಖ್ಯೆ ಇರುವ ಬಿಲ್ಲವ, ಈಡಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಜನವರಿ 6ರಿಂದ ಮಂಗಳೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿ, ಫ್ರೀಡಂ ಪಾರ್ಕ್​ನಲ್ಲಿ ಆಮರಣಾಂತ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಶ್ರೀಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ಬಂಟ್ವಾಳಕ್ಕೆ ಶನಿವಾರ ಆಗಮಿಸಿ, ಶ್ರೀ ನಾರಾಯಣಗುರು ಮಂದಿರಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಲ್ಲವ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಎರಡು ಸಚಿವರಿದ್ದರೂ ಸಮುದಾಯಕ್ಕೆ ಏನೂ ಲಾಭವಿಲ್ಲ. ಬಿಲ್ಲವ ಸಮುದಾಯದ ವೋಟು ಬೇಕು, ಕೋಟಾ ಬೇಕು. ಆದರೆ ಸಮುದಾಯ ಬೇಡ ಎನ್ನುವ ಧೋರಣೆ ಸಲ್ಲದು. ಬ್ರಹ್ಮಶ್ರೀ ನಾರಾಯಣಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮ ಘೋಷಣೆ ಮಾಡಿ 500 ಕೋಟಿ ರೂ.ಗಳನ್ನು ಮೀಸಲಿರಿಸಬೇಕು ಎಂದು ಒತ್ತಾಯಿಸಿದರು.

2023ರ ಚುನಾವಣೆಯಲ್ಲಿ ಮತದ ಲೆಕ್ಕದಲ್ಲಿ ಪ್ರಾತಿನಿಧ್ಯ ಬೇಕು ಎಂದ ಅವರು, ರಾಜಕೀಯ ಕುತಂತ್ರಗಳು, ರಾಜಕೀಯ ಷಡ್ಯಂತ್ರಗಳಿಂದ ಸಮುದಾಯಕ್ಕೆ ಅನ್ಯಾಯವಾಗಿದೆ. ಮಂಗಳೂರಿನಿಂದ ಆರಂಭಗೊಳ್ಳುವ ಪಾದಯಾತ್ರೆಗೆ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದು, ವಿವಿಧ ರಾಜ್ಯಗಳ ಗಣ್ಯರು ಆಗಮಿಸಲಿದ್ದಾರೆ. ಯಾತ್ರೆ ಸಿಗಂದೂರು ಸಹಿತ ವಿವಿಧ ಕಡೆಗಳಿಗೆ ತೆರಳಿ ಬೆಂಗಳೂರು ತಲುಪಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಪ್ರಮುಖರಾದ ಜಿತೇಂದ್ರ ಸುವರ್ಣ, ಬಂಟ್ವಾಳ ಬಿಲ್ಲವ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಆಯ್ದ ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ಆರೋಪ.. ದೂರು ನೀಡಿದ್ರೆ ಲೋಕಾಯುಕ್ತ ತನಿಖೆ ಮಾಡುತ್ತೆ: ಸಚಿವ ಆರಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.