ETV Bharat / state

ಬಂಟ್ವಾಳದ ಮಾಣಿಮಠದಲ್ಲಿ ವಿಷ್ಣುಗುಪ್ತ ವಿವಿ ಶಾಖೆ: ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

ಮಾಣಿ ಮಠ ಸ್ಥಾಪನೆಯ ಮಂಡಲೋತ್ಸವ ಹಾಗೂ 48ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಶಾಖೆಯಾಗಿ ಮಾಣಿಮಠದ ಶ್ರೀರಾಮ ವೇದಪಾಠ ಶಾಲೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

Sri Raghaveshwara Swamiji
ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ
author img

By

Published : Feb 14, 2021, 12:43 PM IST

ಬಂಟ್ವಾಳ: ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಶಾಖೆಯಾಗಿ ಮಾಣಿಮಠದ ಶ್ರೀರಾಮ ವೇದಪಾಠ ಶಾಲೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಘೋಷಿಸಿದರು.

ಮಾಣಿ ಮಠ ಸ್ಥಾಪನೆಯ ಮಂಡಲೋತ್ಸವ ಹಾಗೂ 48ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ಕೃಷ್ಣ ಯಜುರ್ವೇದದ ಪರಿಪೂರ್ಣ ಬೋಧನೆಯ ಜತೆಗೆ ಆಧುನಿಕ ಶಿಕ್ಷಣ, ಭಾರತೀಯ ವಿದ್ಯೆ, ಕಲೆಗಳು ಮತ್ತು ವೇದಾಭ್ಯಾಸವನ್ನು ಇಲ್ಲಿ ಕಲಿಸಿ ಸಮಗ್ರ ಜೀವನ ಶಿಕ್ಷಣ ನೀಡುವ ಕೇಂದ್ರವಾಗಿ ಬೆಳೆಸಲಾಗುವುದು. ಮಠದ ಈ ಪ್ರಯತ್ನಕ್ಕೆ ಸಮಾಜದ ಸ್ಪಂದನೆ ವಿಶೇಷವಾಗಿ ಅಗತ್ಯ ಎಂದು ಹೇಳಿದರು. ಹವ್ಯಕ, ಹಾಲಕ್ಕಿ, ಮುಕ್ರಿ ಸಮಾಜದಂಥ ವಿಶಿಷ್ಟ ಸಂಸ್ಕೃತಿಯನ್ನು ರೂಢಿಸಿಕೊಂಡಿರುವ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ವಿಶೇಷ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ ಎಂದು ಹೇಳಿದರು.

ಕಳೆದ ಮೂರು ದಿನಗಳಿಂದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠಕ್ಕೆ ಸಮಾಜದಿಂದ ದೊಡ್ಡ ಸಮರ್ಪಣೆಯಾಗಿದ್ದು, ಸಹಸ್ರಮಾನದ ಕಾರ್ಯಕ್ಕೆ ಸಮಾಜದಿಂದ ವ್ಯಕ್ತವಾಗುತ್ತಿರುವ ಸ್ಪಂದನೆ ಅನನ್ಯ ಎಂದರು. ಮಂಡಲೋತ್ಸವ ಬಹಳ ಅರ್ಥಪೂರ್ಣವಾಗಿ ಮೂಡಿಬಂದಿದೆ. ಬಹಳಷ್ಟು ಶಿಷ್ಯರು ರಾಮನೈವೇದ್ಯಕ್ಕಾಗಿ ವಿಶೇಷವಾಗಿ ಭತ್ತ ಬೆಳೆಯುತ್ತಿದ್ದು, ಭತ್ತದ ಭಕ್ತಿ ಅನನ್ಯ ಎಂದು ಬಣ್ಣಿಸಿದರು. ಮಾಣಿ ಮಠದಲ್ಲಿ ಶ್ರೀರಾಮ ಪಾಠಶಾಲೆಯ ಉನ್ನತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಮನೈವೇದ್ಯಕ್ಕೆ ಮುಳ್ಳೇರಿಯಾ ಮಂಡಲದ ಪುಟ್ಟ ಮಕ್ಕಳು ಕೊರೊನಾ ಸಂದರ್ಭದಲ್ಲಿ ಬೆಳೆದ 550 ಕೆ.ಜಿ. ಸಾವಯವ ಅಕ್ಕಿಯನ್ನು ಶ್ರೀಸಂಸ್ಥಾನದವರಿಗೆ ಸಮರ್ಪಿಸಲಾಯಿತು.

ಶ್ರೀಮಠದ ಆಡಳಿತ ಮಂಡಳಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ವರದಿ ವಾಚಿಸಿದರು. ಏಪ್ರಿಲ್ 16 ರಿಂದ ನಾಲ್ಕು ದಿನ ಶ್ರೀಗಳ ಯೋಗಪಟ್ಟಾಭಿಷೇಕ ಮತ್ತು ಜೀವನದಾನ ಸಮಾರಂಭ ಮಾಣಿಮಠದಲ್ಲಿ ನಡೆಯಲಿದೆ ಎಂದು ವಿವರಿಸಿದರು. ಪ್ಲವ ಸಂವತ್ಸರದ ಚಾತುರ್ಮಾಸ್ಯವನ್ನು ಮಾಣಿಮಠದಲ್ಲಿ ಕೈಗೊಳ್ಳುವಂತೆ ಸ್ವಾಮೀಜಿಯವರನ್ನು ಈ ಸಂದರ್ಭದಲ್ಲಿ ಸಮಸ್ತ ಶಿಷ್ಯಭಕ್ತರು ಕೋರಿದರು. ಘನಪಾಠಿಗಳಾದ ಶಂಕರನಾರಾಯಣ ಪಳ್ಳತ್ತಡ್ಕ ಅವರು ರಚಿಸಿದ 'ವೇದೋನಿತ್ಯಮಧೀಯತಾಮ್' ಕೃತಿಯನ್ನು ಪರಮಪೂಜ್ಯರು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿದರು.

ಶ್ರೀಮಠದ ಎಲ್ಲಾ ಕಾರ್ಯಕ್ರಮಗಳಲ್ಲಿ ನಿರಂತರ ಕಲಾ ಕಾರ್ಯಕ್ರಮಗಳು ನಡೆಯಲಿವೆ. ರಜತ ಮಂಟಪವನ್ನು ಶ್ರೀರಾಮದೇವರಿಗೆ ಸಮರ್ಪಿಸಲಾಯಿತು. ಕಾರ್ಯಕರ್ತರ ಮಹಾಜಾಗೃತಿಯ ಪ್ರತೀಕವಾಗಿ ರುದ್ರಾಂಶ ಸಂಭೂತ ಹನುಮಂತನಿಗೆ 11 ಬಗೆಯ ವಿಶೇಷ ದ್ರವ್ಯಗಳಿಂದ ವಿಶೇಷ ಮಹಾರುದ್ರಾಭಿಷೇಕ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.