ಮಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣಕನ್ನಡ ಜಿಲ್ಲೆ ಪ್ರತಿ ವರ್ಷದಂತೆ ಈ ವರ್ಷವೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸ್ಥಾನ ಗಳಿಸುವ ವಿಶ್ವಾಸವಿದೆ ಎಂದು ಹೇಳಿದರು.
ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ. ಐದು ವಲಯಗಳನ್ನು ನಿರ್ಮಾಣಮಾಡಿಕೊಂಡು ವಲಯವಾರು ಮಕ್ಕಳಿಗೆ ತರಬೇತಿ ನೀಡುವ ಕಾರ್ಯ ಮಾಡಲಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದರು.