ETV Bharat / state

ಹಿಜಾಬ್​ ವಿವಾದದ ನಡುವೆಯೇ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ

author img

By

Published : Mar 28, 2022, 10:34 AM IST

ದ.ಕ.ಜಿಲ್ಲೆಯಲ್ಲಿ ಒಟ್ಟು 42 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಒಟ್ಟು 29,712 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ 15,615 ಬಾಲಕರು, 14097 ಬಾಲಕಿಯರು ಇಂದು ಪರೀಕ್ಷೆ ಬರೆಯಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

sslc-exam-started in between Hijab clashes
ಹಿಜಾಬ್​ ವಿವಾದದ ನಡುವೆಯೇ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ

ಮಂಗಳೂರು: ಹಿಜಾಬ್ ವಿವಾದದ ನಡುವೆಯೇ ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ ಪರೀಕ್ಷೆಗೆ ಆಗಮಿಸಿದ್ದು, ಮೊದಲ ದಿನದ ಪರೀಕ್ಷೆ ಈಗಾಗಲೇ ಆರಂಭವಾಗಿದೆ. ದ.ಕ.ಜಿಲ್ಲೆಯಲ್ಲಿ ಒಟ್ಟು 42 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಒಟ್ಟು 29,712 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ 15,615 ಬಾಲಕರು, 14097 ಬಾಲಕಿಯರು ಇಂದು ಪರೀಕ್ಷೆ ಬರೆಯಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಯಾವುದೇ ಗೊಂದಲಗಳಿಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಅದರಂತೆ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆ ಬರೆಯಲಿದ್ದಾರೆ. ಆದರೆ, ಖಾಸಗಿ ಶಾಲೆಗಳಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಇದನ್ನು ಓದಿ: ಎಸ್ಎಸ್​ಎಲ್​ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಹೂ ನೀಡಿ ಸ್ವಾಗತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.