ETV Bharat / state

ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಯುಷ್ಯವಿಲ್ಲ‌: ಕೆಪಿಸಿಸಿ ವಕ್ತಾರ ಮೋಹನ್ - KPCC spokesperson P V Mohan

ಕೊರೊನಾ ಸೋಂಕು ನಿಯಂತ್ರಣ ಮಾಡುವಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಕೆಲಸ ಆಗಿದೆ ಎಂದು ಪ್ರಧಾನಮಂತ್ರಿಯವರು ಬಿ.ಎಲ್.ಸಂತೋಷ್ ಅವರನ್ನು ಕರೆದು ಶ್ಲಾಘನೆ ಮಾಡಿರೋದು ಯಡಿಯೂರಪ್ಪನವರನ್ನು ಪದಚ್ಯುತಿಗೊಳಿಸಿ, ಸಂತೋಷ್ ಅವರನ್ನು ಅಧಿಕಾರದ ಗದ್ದುಗೆ ಏರಿಸುವ ಸಂಚಿನ ಭಾಗವಾಗಿದೆ. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಯುಷ್ಯವಿಲ್ಲ‌ ಎಂದು ಕೆಪಿಸಿಸಿ ವಕ್ತಾರ ಪಿ.ವಿ.ಮೋಹನ್ ಹೇಳಿದರು.

State government is about to end: KPCC spokesperson P.V mohan
ರಾಜ್ಯ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ‌: ಕೆಪಿಸಿಸಿ ವಕ್ತಾರ ಪಿ. ವಿ. ಮೋಹನ್
author img

By

Published : May 29, 2020, 11:08 AM IST

ಮಂಗಳೂರು: ಕೊರೊನಾ ಸೋಂಕು ನಿಯಂತ್ರಣ ಮಾಡುವಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಕೆಲಸ ಆಗಿದೆ ಎಂದು ಪ್ರಧಾನಮಂತ್ರಿಯವರು ಬಿ.ಎಲ್.ಸಂತೋಷ್ ಅವರನ್ನು ಕರೆದು ಶ್ಲಾಘನೆ ಮಾಡಿರೋದು ಯಡಿಯೂರಪ್ಪನವರನ್ನು ಪದಚ್ಯುತಿಗೊಳಿಸಿ, ಸಂತೋಷ್ ಅವರನ್ನು ಅಧಿಕಾರದ ಗದ್ದುಗೆ ಏರಿಸುವ ಸಂಚಿನ ಭಾಗವಾಗಿದೆ. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಯುಷ್ಯವಿಲ್ಲ‌ ಎಂದು ಕೆಪಿಸಿಸಿ ವಕ್ತಾರ ಪಿ.ವಿ.ಮೋಹನ್ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಯುಷ್ಯವಿಲ್ಲ‌. ಅದಕ್ಕೆ ಯಡಿಯೂರಪ್ಪನವರು ಎಲ್ಲಾ ಕಾಮಗಾರಿಗಳನ್ನು ಪೂರೈಸಲು ಎಲ್ಲಾ ಕಡೆಗಳಿಗೆ ಓಡಾಡುತ್ತಿದ್ದಾರೆ.

ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಯುಷ್ಯವಿಲ್ಲ‌: ಕೆಪಿಸಿಸಿ ವಕ್ತಾರ ಪಿ.ವಿ.ಮೋಹನ್

ಕೋವಿಡ್ ಸೋಂಕು ಗೆಲ್ಲಬೇಕಾದರೆ ಕ್ವಾರಂಟೈನ್ ವ್ಯವಸ್ಥೆ ಸರಿಯಾಗಿರಬೇಕು. ಇದನ್ನು ಸರ್ಕಾರ ಇನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಕ್ವಾರಂಟೈನ್ ಕೇಂದ್ರಗಳಲ್ಲಿ ಸರಿಯಾಗಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಆದಷ್ಟು ಬೇಗ ಸಮರ್ಪಕ ರೀತಿಯಲ್ಲಿ ವ್ಯವಸ್ಥೆ ಮಾಡದಿದ್ದಲ್ಲಿ ಅಲ್ಲಿಂದಲೇ ಸೋಂಕು ಹರಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೇ 1.1 ಲಕ್ಷ ಮಂದಿ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಆದರೆ ಇವರಲ್ಲಿ ಎಷ್ಟು ಮಂದಿ ಹೋಂ ಕ್ವಾರಂಟೈನ್​ನಲ್ಲಿದ್ದಾರೆ, ಎಷ್ಟು ಮಂದಿ ಶಾಲೆ, ಹೋಟೆಲ್, ಹಾಸ್ಟೆಲ್ ಮುಂತಾದ ಕಡೆಗಳಲ್ಲಿ ಇದ್ದಾರೆ ಎಂಬ ಅಂಕಿ-ಅಂಶಗಳಿಲ್ಲ ಎಂದು ಹೇಳಿದರು.

ಹಲವಾರು ಕ್ವಾರಂಟೈನ್ ಕೇಂದ್ರಗಳಿಂದಲೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕ್ವಾರಂಟೈನ್ ಕೇಂದ್ರಗಳಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು, ಅಲ್ಲಿಂದ ತಪ್ಪಿಸಿಕೊಂಡು ಓಡಾಡುವ ಪ್ರಕರಣಗಳು ಕಂಡು ಬಂದಿವೆ. ಅಷ್ಟೇ ಅಲ್ಲ ಈಗಾಗಲೇ ಕ್ವಾರಂಟೈನ್ ದಂಧೆ ಆರಂಭವಾಗಿವೆ. ಎಲ್ಲಕ್ಕಿಂತ ಆತಂಕದ ವಿಚಾರವೆಂದರೆ ಸುಮಾರು 100ಕ್ಕೂ ಅಧಿಕ ಮಂದಿಯ ಗಡಿ ದಾಟಿ ಕ್ವಾರಂಟೈನ್​ಅನ್ನು ವ್ಯವಸ್ಥಿತವಾಗಿ, ಸಮರ್ಪಕವಾಗಿ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ಶ್ರೀರಾಮುಲು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸುತ್ತಿದೆ ಎಂದು ಪಿ.ವಿ.ಮೋಹನ್ ಹೇಳಿದರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.