ETV Bharat / state

ಕೋವಿಡ್ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲ ಆರೋಪ: ಕಾಂಗ್ರೆಸ್ ಪ್ರತಿಭಟನೆ - ವೆನ್ಲಾಕ್ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ

ಕೊರೊನಾ ವೈರಸ್​​ ಹರಡದಂತೆ ಕ್ರಮ ವಹಿಸುವಲ್ಲಿ ಸರ್ಕಾರ ಎಡವಿದ್ದು, ಸಾಮಾನ್ಯ ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟ ಆಡಿದೆ. ಕೋವಿಡ್​​ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲಗೊಂಡಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Congress protests
ಕಾಂಗ್ರೆಸ್​​ ವತಿಯಿಂದ ಪ್ರತಿಭಟನೆ
author img

By

Published : Jul 23, 2020, 1:32 PM IST

ಮಂಗಳೂರು: ಕೋವಿಡ್-19 ಸೋಂಕು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕೋವಿಡ್-19 ಸೋಂಕನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆ ತರಲು ಸರಿಯಾದ ಆ್ಯಂಬುಲೆನ್ಸ್ ವ್ಯವಸ್ಥೆ ಇಲ್ಲ. ಆಸ್ಪತ್ರೆಯಲ್ಲಿ ದಾಖಲಾಗಿರುವ ಸೋಂಕಿತರಿಗೆ ಸೂಕ್ತವಾದ ವ್ಯವಸ್ಥೆ ಇಲ್ಲ. ಅಲ್ಲದೆ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಮನೆಗೆ ಹೋಗುವ ಸಂದರ್ಭ 2-3 ಲಕ್ಷ ರೂ. ವ್ಯಯ‌ ಮಾಡಬೇಕಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್​​ ವತಿಯಿಂದ ಪ್ರತಿಭಟನೆ

ಲಾಕ್​ಡೌನ್ ಸಂದರ್ಭ ಸರಿಯಾದ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಅವಕಾಶಗಳಿದ್ದರೂ ಅದನ್ನು ನಿಭಾಯಿಸದೆ ಕೈಚೆಲ್ಲಿ ಕುಳಿತಿದೆ. ಕೋವಿಡ್ ಕಿಟ್​​ಗಳ ಖರೀದಿಯಲ್ಲಿ ಸಾವಿರಾರು ಕೋಟಿ ರೂ‌. ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕರು ದಾಖಲೆ ಸಮೇತ ತೋರಿಸಿಕೊಟ್ಟಿದ್ದಾರೆ. ಆದ್ದರಿಂದ ಸರ್ಕಾರದ ವೈಫಲ್ಯತೆಯನ್ನು ಜನತೆಯ ಮುಂದಿಡಲು ಕಾಂಗ್ರೆಸ್ ಪಕ್ಷ ಬೀದಿಗಿಳಿದಿದೆ ಎಂದು ಹೇಳಿದರು.

ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ.ಖಾದರ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯ್ದೀನ್ ಬಾವಾ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಸೇರಿದಂತೆ ಇನ್ನಿತರ ಕಾಂಗ್ರೆಸ್​​ ಮುಂಖಡರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.