ETV Bharat / state

Court Jobs: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ.. ಟೈಪಿಸ್ಟ್​, ಜವಾನ ಹುದ್ದೆಗಳ ಭರ್ತಿ - ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಟೈಪಿಸ್ಟ್​, ಸ್ಟೆನೋಗ್ರಾಫರ್​, ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

stenographer typist peon jobs in Dakshina Kannada District Court

author img

By ETV Bharat Karnataka Team

Published : Oct 28, 2023, 2:50 PM IST

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಲಿಪಿಗಾರ, ಜವಾನ ಸೇರಿದಂತೆ ಒಟ್ಟು 54 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ..

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಇಲ್ಲಿದೆ.

  • ಶೀಘ್ರ ಲಿಪಿಗಾರ ಹುದ್ದೆ- 10
  • ಬೆರಳಚ್ಚುಗಾರ ಹುದ್ದೆ 6
  • ಬೆರಳಚ್ಚು-ನಕಲುಗಾರ ಹುದ್ದೆ- 2
  • ಜವಾನ ಹುದ್ದೆಗಳು -36

ವಿದ್ಯಾರ್ಹತೆ: ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ನಕಲಿಗಾರ ಹುದ್ದೆಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್​ ಕರ್ಮಷಿಯಲ್​ ಪ್ರಾಕ್ಟೀಸ್​ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರ ಲಿಪಿ ಮತ್ತು ಬೆರಳಚ್ಚಿನಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಗರಿಷ್ಠ 35 ವರ್ಷ ಪೂರೈಸಿರಬೆಕು. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಉಳಿದ ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​, ಟೈಪಿಂಗ್​, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ನವೆಂಬರ್​ 6ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 5 ಆಗಿದೆ.

ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು dk.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: KIOCL ನೇಮಕಾತಿ: ಇಂಜಿನಿಯರ್​ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.