ETV Bharat / state

ಕೊರೊನಾ ಚಿಕಿತ್ಸೆ ನೆಪದಲ್ಲಿ ಅಧಿಕ ದರ ವಿಧಿಸಿದರೆ ಕಠಿಣ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೊರೊನಾ ಚಿಕಿತ್ಸೆಯ ನೆಪದಲ್ಲಿ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ದರ ಹೆಚ್ಚಳದ ಬಗ್ಗೆ ಯಾವುದೇ ದೂರು, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಗಳು ಕೇಳಿ ಬಂದಲ್ಲಿ ತನಿಖೆ ನಡೆಸಿ, ಆರೋಪ ಸತ್ಯವಾಗಿದ್ದಲ್ಲಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಚಿವ ಕೋಟ
ಸಚಿವ ಕೋಟ
author img

By

Published : Sep 16, 2020, 11:43 PM IST

ಮಂಗಳೂರು: ಕೊರೊನಾ ಚಿಕಿತ್ಸೆಯ ನೆಪದಲ್ಲಿ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ದರ ಹೆಚ್ಚಳದ ಬಗ್ಗೆ ಯಾವುದೇ ದೂರು, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಗಳು ಕೇಳಿ ಬಂದಲ್ಲಿ ತನಿಖೆ ನಡೆಸಿ, ಆರೋಪ ಸತ್ಯವಾಗಿದ್ದಲ್ಲಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.‘

ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪುರಭವನದಲ್ಲಿ ಬುಧವಾರ ನಡೆದ ಕೋವಿಡ್-19, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆ ಕುರಿತ ವಿಶೇಷ ಜನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಅಧಿಕ ಬಿಲ್ ವಿಧಿಸಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಯಾರೂ ಕೂಡಾ ಆಧಾರ ರಹಿತ, ತಪ್ಪು ಮಾಹಿತಿ ನೀಡಬಾರದು ಎಂದು ಹೇಳಿದರು.

ಆರೋಗ್ಯ ಕರ್ನಾಟಕ ಯೋಜನೆ ಕುರಿತ ವಿಶೇಷ ಜನಸಂವಾದ ಕಾರ್ಯಕ್ರಮ

ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ವೆನ್ಲಾಕ್ ಕೋವಿಡ್ ಆಸ್ಪತ್ರೆ, ದ.ಕ. ಜಿಲ್ಲೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಆಯುಷ್ಮಾನ್ ಭಾರತ್ ಯೋಜನೆಗೆ ಒಳಪಡದ ಖಾಸಗಿ ಆಸ್ಪತ್ರೆಗಳು ತಕ್ಷಣ ನೋಂದಣಿ ಮಾಡಿಕೊಂಡು ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕು. ಆಯುಷ್ಮಾನ್ ಯೋಜನೆ ಅಳವಡಿಸದ ಆಸ್ಪತ್ರೆಗಳು ಕೊರೊನಾ ಸೋಂಕಿತರನ್ನು ಸಮೀಪದ ಆಯುಷ್ಮಾನ್ ಭಾರತ್ ಯೋಜನೆ ಒಳಪಟ್ಟ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಜಿಲ್ಲೆಯ ಆಸ್ಪತ್ರೆಗಳಲ್ಲಿ ಈಗಾಗಲೇ ಅಧಿಕ ಬೆಡ್ ಲಭ್ಯವಿದ್ದು, ಐ.ಸಿ.ಯು, ವೆಂಟಿಲೇಟರ್‍ಗಳಿಗೆ ಯಾವುದೇ ಕೊರತೆ ಇಲ್ಲ. ಮುಂಬರುವ ದಿನಗಳಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 30 ವೆಂಟಿಲೇಟರ್ ಐಸಿಯು ಆಗಲಿದೆ. ಜನರು ಗಾಬರಿಪಡದೆ ಕೊರೊನಾ ರೋಗಕ್ಕೆ ಚಿಕಿತ್ಸೆ ಪಡೆಯಬೇಕು. ಶೀಘ್ರದಲ್ಲಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಸೆಂಟರ್ ತೆರೆಯಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.