ಮಂಗಳೂರು: ಕೆರೆಯಲ್ಲಿ ಈಜಾಡುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.
ವಿಟ್ಲದ ಕಾಶಿಮಠದಲ್ಲಿರುವ ಕೋಟಿಕೆರೆಯಲ್ಲಿ ಸಂಜೆಯ ವೇಳೆ ಈ ಘಟನೆ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ, ವಿಟ್ಲದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಶ್ವದ್ ಅಹ್ಮದ್ ಮೃತಪಟ್ಟ ವಿದ್ಯಾರ್ಥಿ.
ನೀರಿನಲ್ಲಿ ಮುಳುಗುತ್ತಿದ್ದ ಅಶ್ವದ್ನನ್ನು ಸ್ಥಳೀಯ ವ್ಯಕ್ತಿಯೊಬ್ಬರು ನೀರಿನಿಂದ ಮೇಲೆತ್ತಿ ವಿಟ್ಲ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.