ETV Bharat / state

ಬಸ್​ನಿಂದ ಹೊರಬಿದ್ದ ವಿದ್ಯಾರ್ಥಿ ಸಾವು : ಬಸ್​ ಡ್ರೈವರ್, ಕಂಡಕ್ಟರ್ ಬಂಧನ

ಬಸ್​​​ನಿಂದ ಹೊರಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

student-dies-after-being-thrown-out-of-bus-bus-driver-and-conductor-arrested
ಬಸ್​ನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು : ಬಸ್​ ಡ್ರೈವರ್ ಮತ್ತು ಕಂಡಕ್ಟರ್ ಬಂಧನ
author img

By

Published : Sep 19, 2022, 8:27 PM IST

Updated : Sep 23, 2022, 12:52 PM IST

ಮಂಗಳೂರು(ದಕ್ಷಿಣಕನ್ನಡ ): ಬಸ್​​ನಿಂದ ಹೊರಬಿದ್ದ ತಲೆಗೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ. ಬಂಧಿತ ಬಸ್​ ಚಾಲಕನನ್ನು ಕುಪ್ಪೆಪದವು ನಿವಾಸಿ ಕಾರ್ತಿಕ್ ಆರ್ ಶೆಟ್ಟಿ(30) ಮತ್ತು ಬಸ್​ ನಿರ್ವಾಹಕ ಅಂಬ್ಲಮೊಗರು ನಿವಾಸಿ ದಂಶೀರ್ (30) ಎಂದು ಗುರುತಿಸಲಾಗಿದೆ.

ಸೆ 7ರಂದು ಉಳ್ಳಾಲದ ಮಾಸ್ತಿಕಟ್ಟೆಯಿಂದ ಬರುತ್ತಿದ್ದ ಯಶರಾಜ್(16) ಎಂಬ ವಿದ್ಯಾರ್ಥಿ ಬಸ್​​ನಿಂದ ಬಿದ್ದು ಗಾಯಗೊಂಡಿದ್ದ. 44 ಡಿ ನಂಬರಿನ ಖಾಸಗಿ ಬಸ್ಸಿನಲ್ಲಿ ಉಳ್ಳಾಲದಿಂದ ಮಂಗಳೂರಿಗೆ ಕಾಲೇಜಿಗೆ ಬರುತ್ತಿದ್ದ ವೇಳೆ ಅವಘಡ ಸಂಭವಿಸಿತ್ತು.

ಬಸ್​​ನಲ್ಲಿ ಪ್ರಯಾಣಿಕರು ಹೆಚ್ಚಿದ್ದರಿಂದ ಬಸ್​​​​​ ಮುಂಭಾಗದ ಮೆಟ್ಟಿಲಿನಲ್ಲಿ ವಿದ್ಯಾರ್ಥಿ ಯಶರಾಜ್ ನೇತಾಡುತ್ತಿದ್ದ. ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಈತ ಬಸ್​​ನಿಂದ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಈತನನ್ನು ಪಂಪ್ ವೆಲ್​ನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದ. ಸೆ 13ರಂದು ವಿದ್ಯಾರ್ಥಿ ಮೃತಪಟ್ಟಿದ್ದು, ಮೆದುಳು ನಿಷ್ಕ್ರಿಯವಾಗಿದ್ದರಿಂದ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದರು.

ಬಸ್​ ಚಾಲಕನ ಅತಿಧಾವಂತ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ವಿದ್ಯಾರ್ಥಿ ಬಸ್​​ನಿಂದ ಹೊರಗೆ ಬಿದ್ದಿರುವ ಬಗ್ಗೆ ಮೃತ ಹುಡುಗನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : ಬೈಕ್ ಸ್ಕಿಡ್ ಆಗಿ ಅಪಘಾತ: ಅಣ್ಣ ಸಾವು, ತಮ್ಮನ ಸ್ಥಿತಿ ಗಂಭೀರ

Last Updated : Sep 23, 2022, 12:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.