ಮಂಗಳೂರು/ದಕ್ಷಿಣ ಕನ್ನಡ: ಚಲಿಸುತ್ತಿದ್ದ ಶಾಲಾ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದೆ.
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಶಾಲಾ ಬಸ್ಸಿನಲ್ಲಿ ವಿದ್ಯಾರ್ಥಿಯೊಬ್ಬ ಬಸ್ ಹಿಂಭಾಗದಲ್ಲಿ ಕುಳಿತು ಸವಾರಿ ಮಾಡುತ್ತಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.
ವಿದ್ಯಾರ್ಥಿಯ ಹುಚ್ಚು ಸಾಹಸ ಬಸ್ ಚಾಲಕನ ಗಮನಕ್ಕೆ ಬರಲಿಲ್ಲ ಎಂದು ತಿಳಿದು ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಯ ಪೋಷಕರನ್ನು ಕರೆಸಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಅಮಾನತು ಮಾಡಿದೆ.