ETV Bharat / state

ದ.ಕ. ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲಾಧಿಕಾರಿ ಅಭಿನಂದನೆ

author img

By

Published : Jul 4, 2020, 2:34 AM IST

ಯಾವುದೇ ಗೊಂದಲಗಳಿಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪರೀಕ್ಷೆಗೆ ಸಹಕರಿಸಿದ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿ ಸಿಬ್ಬಂದಿ, ಶಾಲಾ ಆಡಳಿತ ಮಂಡಳಿಗಳಿಗೆ, ವಾಹನ ಚಾಲಕರಿಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Sindu rupesh
Sindu rupesh

ಮಂಗಳೂರು: ಕೋವಿಡ್ ಸೋಂಕಿನ ಆತಂಕದ ನಡುವೆಯೂ ಜಿಲ್ಲೆಯಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಸಹಕರಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸೋಂಕಿನ ಭೀತಿಯ ಹಿನ್ನೆಲೆಯಲ್ಲಿಯೂ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ ಉತ್ಸಾಹದಿಂದ ಆಗಮಿಸಿ ಪರೀಕ್ಷೆ ಬರೆದಿದ್ದಾರೆ. ಹೆತ್ತವರು ಈ ಕಾರ್ಯದಲ್ಲಿ ಬಹಳಷ್ಟು ಸಹಕರಿಸಿದ್ದಾರೆ. ನೆರೆಯ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳು ಜಿಲ್ಲಾಡಳಿತ ಒದಗಿಸಿದ ಸಾರಿಗೆ ಸೌಲಭ್ಯ ಬಳಸಿಕೊಂಡು ಪರೀಕ್ಷೆಗೆ ಉತ್ಸಾಹದಿಂದ ಆಗಮಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಕಠಿಣ ಕ್ರಮಗಳನ್ನು ನಿಭಾಯಿಸಿ ಮುಂಜಾಗ್ರತಾ ಕ್ರಮಗಳನ್ನು ನಿರ್ವಹಿಸಿ ಪರೀಕ್ಷೆ ಯಶಸ್ವಿಯಾಗಿ ಪೂರೈಸಲಾಗಿದೆ ಎಂದು ಹೇಳಿದರು.

ಯಾವುದೇ ಗೊಂದಲಗಳಿಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪರೀಕ್ಷೆಗೆ ಸಹಕರಿಸಿದ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿ ಸಿಬ್ಬಂದಿ, ಶಾಲಾ ಆಡಳಿತ ಮಂಡಳಿಗಳಿಗೆ, ವಾಹನ ಚಾಲಕರಿಗೆ ಜಿಲ್ಲಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.