ETV Bharat / state

ಮಂಗಳೂರು: 100ಕ್ಕೂ ಅಧಿಕ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ - ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿ

ಮಂಗಳೂರಿನ ನರ್ಸಿಂಗ್ ಕಾಲೇಜೊಂದರ ಹಾಸ್ಟೆಲ್ ವಿದ್ಯಾರ್ಥಿಗಳು ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲಿ ಅನಾರೋಗ್ಯಕ್ಕೀಡಾಗಿದ್ದಾರೆ.

students got ill after lunch in hostel at mangaluru
ಮಂಗಳೂರು: 100ಕ್ಕೂ ಅಧಿಕ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ
author img

By

Published : Feb 6, 2023, 11:00 PM IST

ಮಂಗಳೂರು: ನಗರದ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲೇ ಏಕಾಏಕಿ ಅನಾರೋಗ್ಯಕ್ಕೀಡಾದ ಘಟನೆ ನಡೆದಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿಗಳನ್ನು ನಗರದ ಸಿಟಿ‌ ಆಸ್ಪತ್ರೆ, ಕೆಎಂಸಿ ಹಾಗೂ ಮಂಗಳಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥರಾಗುತ್ತಿದ್ದಾರೆ. ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್ ಇದಾಗಿದ್ದು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಮುಂಜಾನೆಯಿಂದಲೂ ಅನಾರೋಗ್ಯದಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಮತ್ತೊಂದು ಹಿಟ್ ಅಂಡ್ ರನ್: ಬೈಕ್​ ಸವಾರ ಸಾವು, ಓರ್ವನ ಸ್ಥಿತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.