ETV Bharat / state

ಬಂಟ್ವಾಳ: ಥರ್ಮಲ್ ಟೆಸ್ಟ್ ಬಳಿಕ ಪರೀಕ್ಷಾ ಕೊಠಡಿಗೆ ತೆರಳಿದ ವಿದ್ಯಾರ್ಥಿಗಳು - Bantwal

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಬಂಟ್ವಾಳ ತಾಲೂಕಿನಲ್ಲಿ ಸ್ಯಾನಿಟೈಸ್ ಮಾಡಿದ ಕೊಠಡಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಒಳ ಪ್ರವೇಶಿಸಲು ಅನುವು ಮಾಡಿಕೊಡಲಾಯಿತು.

SSLC Examination
ಥರ್ಮಲ್ ಟೆಸ್ಟ್
author img

By

Published : Jun 25, 2020, 11:08 AM IST

ಬಂಟ್ವಾಳ: ಇಂದು ಆರಂಭಗೊಂಡ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತಾಲೂಕಿನಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಹಿತ ನಾನಾ ಇಲಾಖೆಗಳು ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ತಗೆದುಕೊಂಡಿದೆ.

ಬೆಳಗ್ಗೆಯೇ ತಾಲೂಕಿನ 17 ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿದರು. ಮಾರ್ಕ್​​ ಮಾಡಿದ ಜಾಗದಲ್ಲಿ ನಿಂತು ಸಾಲಾಗಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿಸಲಾಯಿತು. ಮುಡಿಪು, ಮೊಂಟೆಪದವು ಪರೀಕ್ಷಾ ಕೇಂದ್ರಕ್ಕೆ ಶಾಸಕ ಯು.ಟಿ. ಖಾದರ್ ಸಲಹೆಯಂತೆ ಸೂರಜ್ ಶಿಕ್ಷಣ ಸಂಸ್ಥೆ ಮತ್ತು ಅಲ್ ಮದೀನಾ ಶಿಕ್ಷಣ ಸಂಸ್ಥೆ ತಲಾ ಒಂದರಂತೆ ಉಚಿತ ಬಸ್ ಸೌಲಭ್ಯ ಒದಗಿಸಿದೆ.

ಥರ್ಮಲ್ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಎಸ್​ಎಸ್​ಎಲ್​ಸಿ ಪರೀಕ್ಷಾ ಹಾಲ್​ಗೆ ತೆರಳಿದ ವಿದ್ಯಾರ್ಥಿಗಳು

ಸರ್ಕಾರಿ ಶಾಲೆಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸೂಚನೆಯಂತೆ ಅರಳ ಜನಹಿತಾಯ ಶಿಕ್ಷಣ ಸಂಸ್ಥೆಯ 4, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 10, ದಡ್ಡಲಕಾಡು ಶ್ರೀ ದುರ್ಗಾ ಚಾರೀಟೇಬಲ್ ಸಂಸ್ಥೆಯ 4, ಪಚ್ಚಿನಡ್ಕ ಶುಭಲಕ್ಷ್ಮೀ ಟ್ರಾವೆಲ್ಸ್ 4, ಸಜೀಪಮೂಡ ವೃಷಭ ಟ್ರಾವೆಲ್ಸ್ 4 ಬಸ್​ಗಳನ್ನು ಒದಗಿಸಿವೆ. ಉಡುಪಿ ಜಿ.ಶಂಕರ್ ಪ್ರತಿಷ್ಠಾನ ಮತ್ತು ಜಿಲ್ಲಾ ಸ್ಕ್ವೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆ ವಿದ್ಯಾರ್ಥಿಗಳಿಗೆ ತಲಾ 2 ರಂತೆ ಉಚಿತ ಮಾಸ್ಕ್ ವಿತರಿಸಲಾಯಿತು.

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸಹಕರಿಸಿದೆ. ಹಾಗೆಯೇ ಪೊಲೀಸರು ಸೂಕ್ತ ಬಂದೋಬಸ್ತ್ ವಹಿಸಿದ್ದು, ಮಕ್ಕಳು ಅಂತರವನ್ನು ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲು ಹೆಚ್ಚುವರಿ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.