ಮಂಗಳೂರು: ನಗರದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರನ್ನು ಐಸಿಯುವಿನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಸುಕ್ರಿ ಬೊಮ್ಮಗೌಡ ಅವರಿಗೆ ಐಸಿಯುವಿನಲ್ಲಿ ದಾಖಲಿಸಿ ತಂತು ಚಿಕಿತ್ಸೆ ಮತ್ತು ಹೃದಯ ಸಂಬಂಧಿತ ಸಣ್ಣಮಟ್ಟಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
86 ವರ್ಷದ ಸುಕ್ರಜ್ಜಿಯವರು 3-4 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇದರ ಜೊತೆಗೆ ಕಳೆದ ನಾಲ್ಕು ದಿನಗಳಿಂದ ತಲೆಸುತ್ತು ಕಾಣಿಸಿಕೊಂಡಿದ್ದರಿಂದ ಅವರನ್ನು ಶನಿವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆಗೆ ಸ್ಪಂದಿಸಿರುವ ಅವರನ್ನು ಇಂದು ಐಸಿಯುವಿನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಮೂರ್ನಾಲ್ಕು ದಿನದಲ್ಲಿ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಸ್ವಲ್ಪ ಹೊತ್ತು ನೋಡಿಕೊಳ್ಳಿ ಎಂದು ಯುವಕನಿಗೆ 9 ತಿಂಗಳ ಮಗು ಕೊಟ್ಟು ಮಹಿಳೆ ಪರಾರಿ!.. ಮುಂದೇನಾಯ್ತು?