ETV Bharat / state

ಸಂಸದರ ದತ್ತು ಗ್ರಾಮದ ಸರ್ಕಾರಿ ಶಾಲಾ ಜಾಗ ಅತಿಕ್ರಮಣ ಆರೋಪ : ಪ್ರಧಾನಿ ಮೊರೆ ಹೋದ ಗ್ರಾಮಸ್ಥರು - ಸಂಸದ ನಳಿನ್ ಕುಮಾರ್ ಕಟೀಲ್ ಅವರ ದತ್ತು ಗ್ರಾಮ ಬಳ್ಪ ಗ್ರಾಮ ಪಂಚಾಯತ್

ಈ ಸಂಬಂಧ ಮತ್ತೆ ಶಾಲೆಯ ಭೂಮಿಗಾಗಿ ಹೋರಾಟಕ್ಕೆ ಸಿದ್ಧರಾಗಿರುವ ಗ್ರಾಮಸ್ಥರು, ಶಾಲೆಯನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದಿ ಮೊರೆ ಹೋಗಿದ್ದಾರೆ. ಶಾಲೆಯ ಭೂಮಿಯನ್ನು ಅಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದು, ಈ ಭೂಮಿಗೆ ಬೇಕಾದ ದಾಖಲೆಗಳನ್ನು ಇಲಾಖೆಗಳೇ ನೀಡುತ್ತಿರುವುದು ವಿಪರ್ಯಾಸ ಎಂದು ಗ್ರಾಮಸ್ಥರು ಪ್ರಧಾನಿಯ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ..

school land encroachment
ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇನ್ಯ ಹಿರಿಯ ಪ್ರಾಥಮಿಕ ಶಾಲೆ
author img

By

Published : Mar 11, 2022, 11:27 AM IST

ಸುಳ್ಯ(ದಕ್ಷಿಣ ಕನ್ನಡ) : ಸಂಸದ ನಳಿನ್ ಕುಮಾರ್ ಕಟೀಲ್​​ ಅವರ ದತ್ತು ಗ್ರಾಮದ ಶಾಲೆಯೊಂದರ ಅತಿಕ್ರಮಣವನ್ನು ನಿಲ್ಲಿಸಲು ಗ್ರಾಮಸ್ಥರು ಪ್ರಧಾನಮಂತ್ರಿಗಳ ಮೊರೆ ಹೋಗಿದ್ದಾರೆ. ಕಳೆದ 7 ವರ್ಷಗಳಿಂದ ತಮ್ಮ ಶಾಲೆಯ ಜಮೀನನ್ನು ಉಳಿಸುವ ನಿಟ್ಟಿನಲ್ಲಿ ಹಲವು ರೀತಿಯ ಹೋರಾಟ ನಡೆಸಿಕೊಂಡು ಬರುತ್ತಿರುವ ಈ ಗ್ರಾಮಸ್ಥರಿಗೆ ಈವರೆಗೂ ನ್ಯಾಯ ಸಿಕ್ಕಿಲ್ಲ ಎನ್ನಲಾಗಿದೆ.

ಸಂಸದರ ದತ್ತು ಗ್ರಾಮದಲ್ಲಿ ಶಾಲೆ ಜಾಗ ಒತ್ತುವರಿ : ಪ್ರಧಾನಿ ಮೊರೆ ಹೋದ ಗ್ರಾಮಸ್ಥರು

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ದತ್ತು ಗ್ರಾಮವಾದ ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇನ್ಯ ಹಿರಿಯ ಪ್ರಾಥಮಿಕ ಶಾಲೆ ಹೆಸರಿನಲ್ಲಿ ಸುಮಾರು 2 ಎಕರೆಗೂ ಅಧಿಕ ಭೂಮಿಯಿದೆ.

ಆದರೆ, ಈ ಭೂಮಿಯಲ್ಲಿ ಸುಮಾರು 97 ಸೆಂಟ್ಸ್ ಜಾಗವನ್ನು ಶಾಲೆಯ ಪಕ್ಕದಲ್ಲೇ ಇರುವ ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಿಸಿರುವುದಲ್ಲದೇೆ, ಕಂದಾಯ ಅಧಿಕಾರಿಗಳ ಜತೆ ಸೇರಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಇದೀಗ ಸರ್ಕಾರದ ಅಕ್ರಮ-ಸಕ್ರಮ ಕಾನೂನಿನಡಿ 60 ಸೆಂಟ್ಸ್ ಜಾಗವನ್ನು ತನ್ನ ಹೆಸರಿಗೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಮಾಹಿತಿ ಹಕ್ಕಿನಿಂದ ವಿಚಾರ ಬಯಲು : 2015ರಲ್ಲಿ ನಡೆದ ಈ ಪ್ರಕ್ರಿಯೆಯನ್ನು ನಿರಂತರವಾಗಿ ಪ್ರತಿಭಟಿಸುತ್ತಾ ಬರುತ್ತಿರುವ ಕೇನ್ಯ ಗ್ರಾಮಸ್ಥರು ಮತ್ತು ಶಾಲಾಭಿವೃದ್ಧಿ ಸಮಿತಿಯು ಈ ಜಾಗವನ್ನು ಮತ್ತೆ ಶಾಲೆಗೆ ಸೇರಿಸುವಲ್ಲಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ.

ಅಕ್ರಮ-ಸಕ್ರಮ ಸಮಿತಿಯ ಮುಂದೆ ಒಂದು ನಕ್ಷೆಯನ್ನು ತೋರಿಸಿ ಭೂಮಿ ಪಡೆದುಕೊಂಡಿರುವ ಈ ವ್ಯಕ್ತಿ ಜಾಗಕ್ಕೆ ಬೇಕಾದ ದಾಖಲೆಗಳನ್ನು ಸಿದ್ಧ ಪಡಿಸಲು ಇನ್ನೊಂದು ನಕ್ಷೆಯನ್ನು ಕಂದಾಯ ಇಲಾಖೆ ಅಧಿಕಾರಿಗಳ ಮುಂದೆ ಇಡುತ್ತಿದ್ದ ವಿಚಾರ ಇದೀಗ ಗ್ರಾಮಸ್ಥರಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಪಡೆದ ದಾಖಲೆಗಳಿಂದ ತಿಳಿದು ಬಂದಿದೆ.

ಅಳಲು ತೋಡಿಕೊಂಡ ಗ್ರಾಮಸ್ಥರು : ಈ ಸಂಬಂಧ ಮತ್ತೆ ಶಾಲೆಯ ಭೂಮಿಗಾಗಿ ಹೋರಾಟಕ್ಕೆ ಸಿದ್ಧರಾಗಿರುವ ಗ್ರಾಮಸ್ಥರು, ಶಾಲೆಯನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದಿ ಮೊರೆ ಹೋಗಿದ್ದಾರೆ. ಶಾಲೆಯ ಭೂಮಿಯನ್ನು ಅಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದು, ಈ ಭೂಮಿಗೆ ಬೇಕಾದ ದಾಖಲೆಗಳನ್ನು ಇಲಾಖೆಗಳೇ ನೀಡುತ್ತಿರುವುದು ವಿಪರ್ಯಾಸ ಎಂದು ಗ್ರಾಮಸ್ಥರು ಪ್ರಧಾನಿಯ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಗ್ರಾಮಸ್ಥರ ಮನವಿಗೆ ಸ್ಪಂದಿಸಿರುವ ಪ್ರಧಾನಿ ಕಚೇರಿ, ಸಮಸ್ಯೆಯ ಬಗ್ಗೆ ಗಮನ ಹರಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ. ಆದರೆ, ಪ್ರಧಾನಿ ಕಾರ್ಯಾಲಯದ ಸೂಚನೆಗೆ ಕ್ಯಾರೇ ಎನ್ನದ ಅಧಿಕಾರಿಗಳು ಅತಿಕ್ರಮಣ ಭೂಮಿಗೆ ದಾಖಲೆ ನೀಡುವ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂಬುವುದು ಗ್ರಾಮಸ್ಥರ ಆರೋಪ.

ಸ್ವತಃ ಪ್ರಧಾನಿ ಕಾರ್ಯಾಲಯದಿಂದಲೇ ಅಕ್ರಮ ತಡೆಯುವಂತೆ ಸೂಚಿಸಿದ್ದರೂ, ಕ್ರಮಕೈಗೊಳ್ಳಲು ಹಿಂದೆ ಮುಂದೆ ನೋಡುತ್ತಿರುವ ಅಧಿಕಾರಿಗಳ ವಿರುದ್ಧ ಇನ್ನು ಯಾವ ರೀತಿಯ ಹೋರಾಟ ನಡೆಸಬೇಕು ಎನ್ನುವ ಲೆಕ್ಕಾಚಾರದಲ್ಲಿ ಗ್ರಾಮಸ್ಥರಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ 54ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.