ದಕ್ಷಿಣ ಕನ್ನಡ/ಸುಳ್ಯ: ಬೈಕ್ ಸ್ಕಿಡ್ ಆಗಿ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲದಲ್ಲಿ ನಡೆದಿದೆ.
ಮೃತರು ಉತ್ತರಪ್ರದೇಶದ ಮುಜಾಫರ್ ನಗರದ ಡ್ಯಾನಿಶ್ ಮತ್ತು ಅಜ್ಮಲ್ ಎಂಬ ಕಾರ್ಮಿಕರು ಎಂದು ತಿಳಿದು ಬಂದಿದೆ. ಸುಳ್ಯದಿಂದ ಈ ಕಾರ್ಮಿಕರು ಗಾರೆ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.