ETV Bharat / state

ವೀರೇಂದ್ರ ಹೆಗ್ಗಡೆ ಗೌರವಕ್ಕೆ ಚ್ಯುತಿ ಪ್ರಕರಣ: ಸೋಮನಾಥ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್​ - supreme court suspends somanath nayak plea

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಗೌರವಕ್ಕೆ ಚ್ಯುತಿ ತಂದ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

supreme-court-suspends-somanath-plea
ವೀರೇಂದ್ರ ಹೆಗ್ಗಡೆ ಗೌರವಕ್ಕೆ ಚ್ಯುತಿ ಪ್ರಕರಣ: ಸೋಮನಾಥ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್​
author img

By

Published : Oct 26, 2022, 9:16 AM IST

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅಲ್ಲಿನ ಸಂಸ್ಥೆಗಳ ಗೌರವಕ್ಕೆ ಚ್ಯುತಿ ತಂದ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ. ನಾಗರಿಕ ಸೇವಾ ಟ್ರಸ್ಟ್​ ಅಧ್ಯಕ್ಷ ಕೆ ಸೋಮನಾಥ್​ ನಾಯಕ್ ಅವರಿಗೆ ಸ್ಥಳೀಯ ನ್ಯಾಯಾಲಯ ವಿಧಿಸಿದ್ದ 3 ತಿಂಗಳ ಜೈಲು ಶಿಕ್ಷೆ ತೀರ್ಪನ್ನು ಎತ್ತಿಹಿಡಿದಿದೆ.

ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯವು, ಕರ್ನಾಟಕ ಹೈಕೋರ್ಟ್​ ಹಾಗೂ ಬೆಳ್ತಂಗಡಿಯ ನ್ಯಾಯಾಲಯಗಳು ನೀಡಿದ ತೀರ್ಪುಗಳ ಬಗ್ಗೆ ತಾನು ಮಧ್ಯಪ್ರವೇಶಿಸುವ ಯಾವುದೇ ಅಗತ್ಯತೆ ಕಂಡು ಬಂದಿಲ್ಲ. ನ್ಯಾಯಾಲಯದ ಪ್ರತಿಬಂಧಕಾಜ್ಞೆ ಊರ್ಜಿತದಲ್ಲಿದ್ದರೂ ಅರ್ಜಿದಾರರಾದ ಸೋಮನಾಥ್ ನಾಯಕ್​​ ಪದೇ ಪದೆ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆ ಎಂದಿದೆ. ಅಲ್ಲದೆ, ತಪ್ಪಿತಸ್ಥ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ಅರ್ಜಿದಾರರಿಗೆ ಛೀಮಾರಿ ಹಾಕಿದ್ದು, ಕ್ಷಮಾಪಣೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅಲ್ಲಿನ ಸಂಸ್ಥೆಗಳ ಗೌರವಕ್ಕೆ ಚ್ಯುತಿ ತಂದ ಬಗ್ಗೆ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್​ನ ಅಧ್ಯಕ್ಷ ಕೆ. ಸೋಮನಾಥ್ ನಾಯಕ್ ಮತ್ತು ಇತರ 5 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಬೆಳ್ತಂಗಡಿ ಸಿವಿಲ್ ನ್ಯಾಯಾಲಯವು 2013ರ ನ.5ರಂದು ಸೋಮನಾಥ್​​ ಮತ್ತು ಇತರ 5 ಮಂದಿಯ ವಿರುದ್ಧ ಪ್ರತಿಬಂಧಕಾಜ್ಞೆ ಮಾಡಿತ್ತು.

ಆದರೆ, ಇದಾದ ಬಳಿಕವೂ ಕೂಡ ನ್ಯಾಯಾಲಯದ ಆದೇಶ ದಿಕ್ಕರಿಸಿ ಸೋಮನಾಥ ನಾಯಕ್ ಸಾಮಾಜಿಕ ಜಾಲತಾಣಗಳ ಮೂಲಕ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸುಳ್ಳು ಆರೋಪ ಮುಂದುವರೆಸಿದ್ದರು. ಈ ವಿಚಾರವು ನ್ಯಾಯಾಲಯದ ಮೆಟ್ಟಿಲೇರಿದ್ದು, ಸುದೀರ್ಘ ವಿಚಾರಣೆ ಬಳಿಕ ಸೋಮನಾಥ ನಾಯಕ್ ದೋಷಿ ಎಂದು ಪರಿಗಣಿಸಿ 3 ತಿಂಗಳ ಸಜೆ ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ 4.5 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶಿಸಿದ್ದ ಕೋರ್ಟ್​ ನಾಯಕ್‌ ಅವರ ಆಸ್ತಿಯನ್ನೂ ಸಹ ಮುಟ್ಟುಗೋಲು ಹಾಕಬಹುದು ಎಂದು ಆದೇಶಿಸಿತ್ತು.

ಈ ಆದೇಶದ ವಿರುದ್ಧ ಸೋಮನಾಥ ನಾಯಕ್ ಅಪರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಬಳಿಕ ಸುದೀರ್ಘ ವಿಚಾರಣೆ ನಂತರ 2022ರ ಮಾರ್ಚ್ 22ರಂದು ಕೋರ್ಟ್,​ ಅರ್ಜಿಯಲ್ಲಿ ನಿಜಾಂಶವಿಲ್ಲ ಎಂದು ತೀರ್ಪು ನೀಡಿತ್ತು. ಅಲ್ಲದೇ, ತನಿಖಾ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಎತ್ತಿ ಹಿಡಿದು ಅರ್ಜಿ ವಜಾ ಮಾಡಿತ್ತು. ಎರಡೂ ನ್ಯಾಯಾಲಯಗಳಲ್ಲಿ ಸೋಮನಾಥ ನಾಯಕ್​ ಅವರು ತಪ್ಪಿತಸ್ಥರೆಂದು ಸಾಬೀತಾದ ಕಾರಣ ಬೆಳ್ತಂಗಡಿಯ ಹೆಚ್ಚುವರಿ ನ್ಯಾಯಾಲಯವು 2022ರ ಮಾ. 31ರಂದು ನಾಯಕ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿ, 3 ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು.

ಈ ಮೇಲಿನ ಆದೇಶಗಳ ವಿರುದ್ಧ ಸೋಮನಾಥ ನಾಯಕ್, ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ತನ್ನನ್ನು ಬಂಧಿಸದಂತೆ ತಡೆಯಾಜ್ಞೆ ನೀಡಬೇಕು ಮತ್ತು ಬೆಳ್ತಂಗಡಿ ನ್ಯಾಯಾಲಯಗಳ ಆದೇಶ ವಜಾ ಮಾಡಬೇಕೆಂದು ಮನವಿ ಮಾಡಿದ್ದರು. ವಾದ - ಪ್ರತಿವಾದ ಆಲಿಸಿದ ಹೈಕೋರ್ಟ್, ಎರಡೂ ನ್ಯಾಯಾಲಯಗಳ ಆದೇಶ ನ್ಯಾಯೋಚಿತವಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸುವ ಅಗತ್ಯವೇ ಇಲ್ಲ ಎಂದು ಹೇಳಿ ಸೋಮನಾಥ್​​ ನಾಯಕ್ ಬಂಧನಕ್ಕೆ ಹಸಿರು ನಿಶಾನೆ ತೋರಿತ್ತು.

ಹೈಕೋರ್ಟ್​ನ ಈ ಆದೇಶದ ವಿರುದ್ಧ ಸೋಮನಾಥ್ ನಾಯಕ್ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲಿಯೂ ಕೂಡ ಅರ್ಜಿ ವಜಾಗೊಂಡಿದೆ. ಕೆ. ಸೋಮನಾಥ್ ನಾಯಕ್ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯವು ಈಗಾಗಲೇ ವಾರೆಂಟ್ ಜಾರಿಗೊಳಿಸಿದೆ.

ಇದನ್ನೂ ಓದಿ: ಸಚಿವ ಮಾಧುಸ್ವಾಮಿ ವಿರುದ್ಧದ ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ರವಾನಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.