ETV Bharat / state

ಸುರತ್ಕಲ್‌ ಜಲೀಲ್​ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸುರತ್ಕಲ್‌ನ ಕಾಟಪಳ್ಳ ಸಮೀಪದ ಕೃಷ್ಣಾಪುರದ ನಿವಾಸಿ, ವ್ಯಾಪಾರಿ ಜಲೀಲ್​ ಅವರನ್ನು ಶುಕ್ರವಾರ ರಾತ್ರಿ ಚಾಕುವಿನಿಂದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

jalil-murder-case
ಜಲೀಲ್​ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ
author img

By

Published : Dec 26, 2022, 3:36 PM IST

Updated : Dec 27, 2022, 3:49 PM IST

ಮಂಗಳೂರು: ಸುರತ್ಕಲ್​​​​ನ ಕೃಷ್ಣಾಪುರ ನಿವಾಸಿ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ಜಲೀಲ್ ಅಂತ್ಯಕ್ರಿಯೆ ನಡೆದ 24 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರಲ್ಲಿ ಮೂರು ಮಂದಿಯಲ್ಲಿ ಇಬ್ಬರು ಜಲೀಲ್​​ನನ್ನು ಫ್ಯಾನ್ಸಿ ಅಂಗಡಿಗೆ ನುಗ್ಗಿ ಚೂರಿಯಿಂದ ಇರಿದಿದ್ದರು. ಮತ್ತೊಬ್ಬ ಕೊಲೆ ಆರೋಪಿಗಳನ್ನು ಬೈಕ್​​​ನಲ್ಲಿ ಪರಾರಿ ಆಗಲು ಸಹಕರಿಸಿದ್ದ. ಪೊಲೀಸ್ ತನಿಖಾ ತಂಡ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಈ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಬಂಧಿಸಿದೆ. ಬಂಧಿತರನ್ನು ಶೈಲೇಶ್​ ಅಲಿಯಾಸ್​ ಶೈಲೇಶ್​ ಪೂಜಾರಿ, ಉಡುಪಿಯ ಹೆಜಮಾಡಿ ನಿವಾಸಿ ಎಚ್​​ ಸವಿನ್​ ಕಾಂಚಾನ್​ ಅಲಿಯಾಸ ಮುನ್ನ ಹಾಗೂ ಕೃಷ್ಣಾಪೂರ ಮೂರನೇ ಬ್ಲಾಕ್​ ನಿವಾಸಿ ಪವನ್​ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ

ಈ ಬಗ್ಗೆ ಮಂಗಳೂರು ಪೊಲೀಸ್​ ಕಮಿಷನರ್​ ಶಶಿಕುಮಾರ್​ ಮಾಹಿತಿ ನೀಡಿದ್ದಾರೆ. 'ಪ್ರತ್ಯಕ್ಷದರ್ಶಿಗಳ ಮುಂದೆ ಪೆರೆಡ್ ಮಾಡಿಸುವ ಕ್ರಮ ಇರುವುದರಿಂದ ಆರೋಪಿಗಳ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ. ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಆ ಬಳಿಕ ಮುಂದಿನ ತನಿಖೆಗೆ 14 ದಿನಗಳ ಕಾಲ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗುತ್ತದೆ' ಎಂದು ತಿಳಿಸಿದ್ದಾರೆ.

'ಈ ಮೂವರು ಆರೋಪಿಗಳನ್ನು ನಿನ್ನೆ ರಾತ್ರಿಯೇ ವಶಕ್ಕೆ ಪಡೆದುಕೊಳ್ಳಲಾಗಿದೆ‌. ಈ ಪ್ರಕರಣದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಆರೋಪಿಗಳಲ್ಲಿ ಇಬ್ಬರು ಈ ಹಿಂದೆ ವಿವಿಧ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದವರು.‌ ಆರೋಪಿಗಳಲ್ಲಿ ಓರ್ವನು 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿಯೂ ಭಾಗಿಯಾಗಿದ್ದ' ಎಂದು ಪೊಲೀಸ್​ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಘಟನೆ ಹಿನ್ನೆಲೆ: ಶನಿವಾರ ರಾತ್ರಿ ಸುರತ್ಕಲ್​ನಲ್ಲಿ ದುಷ್ಕರ್ಮಿಗಳಿಬ್ಬರು ಕೃಷ್ಣಾಪುರ ನಿವಾಸಿ ಜಲೀಲ್ ಎಂಬುವವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು. ನೈತಂಗಡಿಯಲ್ಲಿ ಜಲೀಲ್ ದಿನಸಿ ಅಂಗಡಿ ಹೊಂದಿದ್ದಾರೆ. ಅಂಗಡಿಯಲ್ಲಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಆರೋಪಿಗಳು ಎದೆಯ ಭಾಗಕ್ಕೆ ಚೂರಿಯಿಂದ ಬಲವಾಗಿ ಇರಿದು ಪರಾರಿಯಾಗಿದ್ದರು.

ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಜಲೀಲ್ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಪೋಸ್ಟ್ ಮಾರ್ಟಂ ವ್ಯವಸ್ಥೆಗಾಗಿ ಅವರ ಮೃತದೇಹವನ್ನು ಎ.ಜೆ.ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿತ್ತು. ಹತ್ಯೆ ಪ್ರಕರಣದಿಂದಾಗಿ ಸುರತ್ಕಲ್​ನ ಸುತ್ತಮುತ್ತ ಉದ್ವಿಗ್ನ ವಾತಾವರಣ ಉಂಟಾಗಿತ್ತು.

ಇದನ್ನೂ ಓದಿ: ಜಲೀಲ್ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗೆ 8 ಅಧಿಕಾರಿಗಳ ತಂಡ ರಚನೆ -ಪೊಲೀಸ್ ಕಮಿಷನರ್

Last Updated : Dec 27, 2022, 3:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.