ETV Bharat / state

ಬಂಟ್ವಾಳದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ: 2 ಬೋಟ್, ಟಿಪ್ಪರ್ ವಶ - ಬಂಟ್ವಾಳ ತಾಲೂಕಿನ ಪಾಣೆಮಂಗಳೂರು

ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಯ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ಮಾಡಿದ ಅಧಿಕಾರಿಗಳು 2 ಬೋಟ್ ಮತ್ತು ಟಿಪ್ಪರ್​​ನ್ನು ವಶಕ್ಕೆ ಪಡೆದಿದ್ದಾರೆ.

bantwal
ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ
author img

By

Published : Jun 26, 2021, 9:40 AM IST

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಬಳಿ ನಡೆಯುತ್ತಿದ್ದ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಲಾಗಿದೆ. ಈ ಸಂದರ್ಭ ಮರಳುಗಾರಿಕೆಗೆ ಬಳಸಲಾಗುತ್ತಿದ್ದ 2 ಬೋಟ್ ಮತ್ತು ಟಿಪ್ಪರ್​​ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.

ಮಧ್ಯರಾತ್ರಿ ಸುಮಾರು 12.30ರ ವೇಳೆ ಕಂದಾಯ ಇಲಾಖೆ ಸಿಬ್ಬಂದಿ, ಅರಣ್ಯ ಇಲಾಖೆ ಮತ್ತು ನಗರ ಠಾಣೆ ಪೊಲೀಸರ ಸಹಯೋಗದೊಂದಿಗೆ ನಡೆಸಿದ್ದು, ದಾಳಿ ವೇಳೆ ಇಬ್ಬರು ಪರಾರಿಯಾಗಿದ್ದಾರೆ. ಪಾಣೆಮಂಗಳೂರು ಹಳೇ ಸೇತುವೆಯ ಅನತಿ ದೂರದ ಸರ್ಕಾರಿ ಜಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಕುರಿತು ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ.

ತಹಶೀಲ್ದಾರ್ ಜತೆ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಕಂದಾಯ ಇಲಾಖೆಯ ವಿಎ ಗಳಾದ ಜನಾರ್ಧನ, ಧರ್ಮ, ನಾಗರಾಜ್, ಚಾಲಕ ಶಿವಪ್ರಸಾದ್, ಬಂಟ್ವಾಳ ಅರಣ್ಯ ಇಲಾಖೆಯ ಉಪವಲಯಾರಣ್ಯಾಧಿಕಾರಿ ಪ್ರೀತಂ, ಜಿತೇಶ್ ಸಿಬ್ಬಂದಿಗಳಾದ ಬಸವ ಹಾಗೂ ಪ್ರವೀಣ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.