ಬೆಳ್ತಂಗಡಿ: ಸರ್ಕಾರದ ಆದೇಶದಂತೆ ನಿನ್ನೆ ರಾತ್ರಿ ತಾಲೂಕಿನ ವಿವಿಧ ಕಡೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ 452 ಮಂದಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಕಳುಹಿಸಲಾಗಿದೆ.
ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ಪ್ರತಿಯೊಬ್ಬ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಊರಿಗೆ ಕಳುಹಿಸಿ ಕೊಡಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೂಚನೆಯಂತೆ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮದು ಶೆಟ್ಟಿ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಉಪತಹಶೀಲ್ದಾರ್, ಕಂದಾಯ ನಿರೀಕ್ಷಕರು, ಗ್ರಾಮಕರಣಿಕರು ಸಹಕರಿಸಿದರು.
ಏ.24ರಂದು ಮೊದಲ ಹಂತದಲ್ಲಿ ರಾಜ್ಯದ 176 ವಲಸೆ ಕಾರ್ಮಿಕರನ್ನು ಅವರ ಗ್ರಾಮಕ್ಕೆ ಕಳುಹಿಸಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಹೊರ ರಾಜ್ಯದ 452 ಮಂದಿಯನ್ನು 18 ಬಸ್‌ಗಳ ಮೂಲಕ ಕಳುಹಿಸಿಕೊಡಲಾಯಿತು.