ETV Bharat / state

ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ತಮಿಳು ನಟ ವಿಶಾಲ್ - ನಟ ವಿಶಾಲ್

ಕಾಲಿವುಡ್ ನಟ ವಿಶಾಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಿಶಾಲ್ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದರು.

Tamil actor Vishal visits Dharmasthala
ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್
author img

By

Published : Nov 12, 2022, 7:25 AM IST

ಬೆಳ್ತಂಗಡಿ(ದಕ್ಷಿಣ ಕನ್ನಡ): ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ವಿಶಾಲ್ ಜೊತೆ ಸ್ನೇಹಿತರು ಕೂಡ ಇದ್ದರು.

ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ಮಂಜುನಾಥ ಸ್ವಾಮಿ ಆಶೀರ್ವಾದ ಪಡೆದಿದ್ದಾರೆ.

ಈ ವೇಳೆ ನೆಚ್ಚಿನ ನಟನನ್ನು ನೋಡಿ ಫ್ಯಾನ್ಸ್ ಸೆಲ್ಫಿಗಾಗಿ ಮುಗಿಬಿದ್ದಿದ್ದರು.‌ ವಿಶಾಲ್ 'ಲಾಠಿ' ಚಿತ್ರದ ಮೂಲಕ ಖಡಕ್ ಆಫೀಸರ್ ಆಗಿ ತೆರೆಗೆ ಅಪ್ಪಳಿಸುತ್ತಿದ್ದಾರೆ. ಹೊಸ ಸಿನಿಮಾಗಾಗಿ ನಿರ್ದೇಶನಕ್ಕೂ ಅವರು ಕೈ ಹಾಕಿದ್ದಾರೆ.

ನಾನು ಶಕ್ತಿಧಾಮದ ಸ್ವಯಂಸೇವಕ: ನಟ ಪುನೀತ್​ ರಾಜ್​ಕುಮಾರ ಮೃತಪಟ್ಟ ನಂತರ ಮೈಸೂರಿನ ಶಕ್ತಿ ಧಾಮ ಆಶ್ರಮಕ್ಕೆ ನಟ ವಿಶಾಲ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ್ದ ಅವರು ನಾನು ಶಕ್ತಿಧಾಮದ ಸ್ವಯಂಸೇವಕನಾಗಿರುತ್ತೇನೆ ಎಂದು ಹೇಳಿದ್ದರು. ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿದೆ. ದೇವಸ್ಥಾನಕ್ಕೆ ಹೋದರೆ ಒಂದು ದೇವರ ದರ್ಶನ ಪಡೆಯಬಹುದು. ಆದರೆ, ಇಲ್ಲಿ ಒಂದೊಂದು ಮಕ್ಕಳಲ್ಲೂ ಒಂದೊಂದು ದೇವರನ್ನು ನೋಡಿದೆ. ಮಕ್ಕಳು ತುಂಬಾ ಲವಲವಿಕೆಯಿಂದ ಇದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ನಾನು ಶಕ್ತಿಧಾಮದ ಸ್ವಯಂಸೇವಕನಾಗಿರುತ್ತೇನೆ.. ನಟ ವಿಶಾಲ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.