ETV Bharat / state

ಮೌಲ್ಯಾಧಾರಿತ ಸಮಾಜ ಸೃಷ್ಟಿಗೆ ಶಿಕ್ಷಕರು ಕಾರಣ: ಸಂಜೀವ ಮಠಂದೂರು

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ನಿಮಿತ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು.

Puttur
ಸನ್ಮಾನ ಕಾರ್ಯಕ್ರಮ
author img

By

Published : Oct 5, 2020, 8:55 PM IST

ಪುತ್ತೂರು: ಶಿಕ್ಷಕರು ಮೌಲ್ಯಾಧಾರಿತ ಸಮಾಜ ಸೃಷ್ಟಿಗೆ ಕಾರಣಕರ್ತರಾಗಿದ್ದು, ಅದಕ್ಕಾಗಿ ಶಿಕ್ಷಕ ವೃತ್ತಿ ಗೌರವಯುತವಾಗಿದೆ. ಮಕ್ಕಳ ಭವಿಷ್ಯ ರೂಪಿಸುವ ದೊಡ್ಡ ಜವಾಬ್ದಾರಿ ಹೊಂದಿರುವ ಶಿಕ್ಷಕರು ಮಗುವಿನ ಮನಸ್ಸಿನಲ್ಲಿ ಸ್ವಾತಂತ್ರ್ಯ ತುಂಬುವ ಜೊತೆಗೆ ಅವರಲ್ಲಿ ಬದುಕಿನ ಕಟು ವಾಸ್ತವ ಅರಿತುಕೊಳ್ಳುವಂತೆ ಅರಿವು ಮೂಡಿಸಬೇಕಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಸೋಮವಾರ ಪುತ್ತೂರಿನ ಪುರಭವನದಲ್ಲಿ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯ ನಿಮಿತ್ತ ನಡೆದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಸಚಿವರಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯನ್ನು ತರುವ ಪ್ರಯತ್ನಗಳಾಗಿದೆ. ಮಕಾಲೆ ಶಿಕ್ಷಣ ಪದ್ಧತಿಯಿಂದ ಹೊರತಂದು ಪರಂಪರೆಯ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಿದೆ. ಅದಕ್ಕೆ ಎಲ್ಲರೂ ಸಿದ್ದರಾಗಬೇಕಾಗಿದೆ ಎಂದರು.

ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.

ಮಕ್ಕಳನ್ನು ಬಿಳಿಕಾಲರ್ ಆಧಾರಿತ ಶಿಕ್ಷಣ ವ್ಯವಸ್ಥೆಯಿಂದ ಹೊರತಂದು ದೇಶಪ್ರೇಮದ ಶಿಕ್ಷಣಕ್ಕೆ ತರಬೇಕಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ಖಾಸಗಿ ಶಾಲೆಯಲ್ಲಿದ್ದು, ಪ್ರತಿಭಾವಂತ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿರುವುದು ದುರಂತವಾಗಿದೆ. ಇದು ಬದಲಾಗಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಈ ಸಾಲಿನ ನಿವೃತ್ತ ಶಿಕ್ಷಕರು, ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಧತ್ತಿನಿಧಿ ಪ್ರಶಸ್ತಿ, ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ವಿಜೇತರಿಗೆ ಶಿಕ್ಷಕರ ಕಲ್ಯಾಣ ನಿಧಿ ಬಹುಮಾನ ನೀಡಿ ಗೌರವಿಸಲಾಯಿತು. ವೃತ್ತಿಯಲ್ಲಿರುವಾಗ ಮೃತಪಟ್ಟ ಶಿಕ್ಷಕರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು ಹಾಗೂ ಅವರ ಕುಟುಂಬಸ್ಥರ ಉಪಸ್ಥಿತಿಯಲ್ಲಿ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ, ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಮುಂತಾದವರು ಸರ್ವೋತ್ತಮ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.