ETV Bharat / state

ಮಳಲಿ ಮಸೀದಿ ಸಂಬಂಧ ತಾಂಬೂಲ ಪ್ರಶ್ನೆ; ಗುರುಮಠದ ಸಾನಿಧ್ಯ ಬೆಳಕಿಗೆ, ಒಗ್ಗಟ್ಟಿನ ಪರಿಹಾರಕ್ಕೆ ಸೂಚನೆ

ಈ ಜಾಗದ ಮಾಲಕತ್ವ ಹೊಂದಿರುವವರೂ ಸೇರಿದಂತೆ ಎಲ್ಲರೂ ಒಟ್ಟಾಗಿ ಜೀರ್ಣೋದ್ಧಾರ ಮಾಡಬೇಕು. ಇಲ್ಲದಿದ್ದರೆ ಊರಿಗೆ ಗಂಡಾಂತರವಿದೆ ಎಂದು ತಾಂಬೂಲ ಪ್ರಶ್ನೆಯಲ್ಲಿ ತಿಳಿದುಬಂದಿದೆ.

Thamboola Prashne Start In Mosque Issue
ಮಳಲಿ ಮಸೀದಿ ವಿಚಾರದಲ್ಲಿ ತಾಂಬೂಲ ಪ್ರಶ್ನೆ
author img

By

Published : May 25, 2022, 10:27 AM IST

ಮಂಗಳೂರು: ನಗರದ ಹೊರವಲಯದ ಗಂಜಿಮಠದ ಮಳಲಿ ಎಂಬಲ್ಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ಪತ್ತೆಯಾದ ದೇವಾಲಯದ ಶೈಲಿಯ ಕುರುಹುಗಳ ಹಿನ್ನೆಲೆಯಲ್ಲಿ ಇಂದು ನಡೆದ ತಾಂಬೂಲ ಪ್ರಶ್ನೆಯಲ್ಲಿ ಗುರುಮಠದ ಸಾನಿಧ್ಯ ಬೆಳಕಿಗೆ ಬಂದಿದ್ದು, ಇದನ್ನು ಒಟ್ಟಾಗಿ ಸೇರಿ ಪರಿಹರಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಮಳಲಿ ಮಸೀದಿ ನವೀಕರಣ ವೇಳೆ ದೇಗುಲದ ಕುರುಹು ಪತ್ತೆ; ಇಂದು ತಾಂಬೂಲ ಪ್ರಶ್ನೆ

ವಿಹಿಂಪ, ಬಜರಂಗದಳದಿಂದ ಆಯೋಜಿಸಲಾದ ತಾಂಬೂಲ ಪ್ರಶ್ನೆಯನ್ನು ಕೇರಳದ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ನಡೆಸಿಕೊಟ್ಟರು. ಪುರಾತನ ಕಾಲದಲ್ಲಿ ಈ ಸ್ಥಳದಲ್ಲಿ ಗುರುಮಠದ ಸಾನಿಧ್ಯ ಇರುವುದು ತಾಂಬೂಲ ಪ್ರಶ್ನೆಯಲ್ಲಿ ತಿಳಿದುಬಂದಿದೆ. ಹಿಂದಿನ ಕಾಲದಲ್ಲಿ ವಿವಾದದಿಂದ (ಶೈವ/ವೈಷ್ಣವ ವಿವಾದ) ನಾಶವಾಯಿತು. ಆ ಸಂದರ್ಭದಲ್ಲಿ ಒಂದು ಮರಣವೂ ಆಗಿದೆ. ನಾಶವಾದಾಗ ಈ ಸ್ಥಳದಲ್ಲಿ ಇದ್ದವರು ಇಲ್ಲಿಂದ ಹೋಗಿದ್ದಾರೆ. ಇಲ್ಲಿಂದ ಮಠವನ್ನು ಸಹ ಬೇರೆಡೆ ಸ್ಥಳಾಂತರ ಮಾಡಿದ್ದಾರೆ. ಆದರೆ, ಅವರು ಪೂರ್ಣವಾಗಿ ಕೊಂಡು ಹೋಗಿಲ್ಲ. ಅರ್ಧ ಸಾನಿಧ್ಯ ಇಲ್ಲಿಯೇ ಉಳಿದಿದೆ.

ಇದೀಗ ಈ ಜಾಗದ ಮಾಲಕತ್ವ ಹೊಂದಿರುವವರೂ ಸೇರಿದಂತೆ ಎಲ್ಲರೂ ಒಟ್ಟಾಗಿ ಜೀರ್ಣೋದ್ಧಾರ ಮಾಡಬೇಕು. ಇಲ್ಲದಿದ್ದರೆ ಊರಿಗೆ ಗಂಡಾಂತರವಿದೆ ಎಂದು ತಾಂಬೂಲ ಪ್ರಶ್ನೆಯಲ್ಲಿ ತಿಳಿದುಬಂದಿದೆ. ಈ ಪ್ರದೇಶದಲ್ಲಿ ಶಿವಕಲೆಯಿದೆ. ಅಲ್ಲಿ ಶಿವಸಾನಿಧ್ಯವಿದೆ. ಇದರ ಆರಾಧನೆ ಮಾಡಿದ ಪೂರ್ವಿಕರ ಮನೆಯಲ್ಲಿ ಈಗಲೂ ಪೂಜೆ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.