ETV Bharat / state

ಲಾಕ್​ಡೌನ್​ನಿಂದಾಗಿ ಗಡಿಯಲ್ಲೇ ಮದುವೆಯಾಗಲು ನಿರ್ಧರಿಸಿದ ವಧು-ವರ: ಮುಂದೇನಾಯ್ತು?

ಕೊರೋನಾ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಪ್ರಯಾಣಕ್ಕೆ ನಿರ್ಬಂಧ ವಿಧಿಸಿದ್ದರಿಂದ ಪಾಸ್‍ಗಾಗಿ ಪುಷ್ಪರಾಜ್ ಹಲವು ಬಾರಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕಾಸರಗೋಡು ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ನಿಗದಿಪಡಿಸಿದ ಮುಹೂರ್ತ ಬದಲಾಯಿಸಲು ಮನಸ್ಸು ಮಾಡದ ಎರಡೂ ಕಡೆಯ ಕುಟುಂಬಸ್ಥರು ಸೋಮವಾರ ದಿಬ್ಬಣ ಸಮೇತ ತಲಪಾಡಿ ಗಡಿಗೆ ಬಂದು ಅಲ್ಲೇ ಮದುವೆ ಮಾಡಲು ನಿರ್ಧರಿಸಿದರು.

The bride-groom r
ಗಡಿಯಲ್ಲೆ ಮದುವೆಯಾಗಲು ನಿರ್ಧರಿಸಿದ ವಧು-ವರ
author img

By

Published : May 19, 2020, 12:47 PM IST

ಉಳ್ಳಾಲ: ಜಿಲ್ಲಾಡಳಿತದಿಂದ ಮದುವೆಗೆ ತೆರಳಲು ಪಾಸ್ ಸಿಗದೇ ನೊಂದ ವಧು-ವರನ ಕುಟುಂಬ ಗಡಿಭಾಗ ತಲಪಾಡಿಯಲ್ಲೇ ತಾಳಿಕಟ್ಟಿಸಲು ಮುಂದಾದ ಘಟನೆ ಕೇರಳದ ಗಡಿ ಭಾಗ ತಲಪಾಡಿಯಲ್ಲಿ ನಡೆದಿದೆ.

ಮಂಗಳೂರಿನ ವಿಮಲಾ ಎಂಬುವರ ಜೊತೆ ಕಾಸರಗೋಡು ಮುಳ್ಳೇರಿಯಾ ನಿವಾಸಿ ಪುಷ್ಪರಾಜ್ ಎಂಬುವರ ವಿವಾಹ ಸೋಮವಾರ ಮಂಗಳೂರಿನಲ್ಲಿ ನಿಶ್ಚಯವಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಪ್ರಯಾಣಕ್ಕೆ ನಿರ್ಬಂಧ ವಿಧಿಸಿದ್ದರಿಂದ ಪಾಸ್‍ಗಾಗಿ ಪುಷ್ಪರಾಜ್ ಹಲವು ಬಾರಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಕಾಸರಗೋಡು ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ನಿಗದಿಪಡಿಸಿದ ಮುಹೂರ್ತ ಬದಲಾಯಿಸಲು ಮನಸ್ಸು ಮಾಡದ ಎರಡೂ ಕಡೆಯ ಕುಟುಂಬಸ್ಥರು ಸೋಮವಾರ ದಿಬ್ಬಣ ಸಮೇತ ತಲಪಾಡಿ ಗಡಿಗೆ ಬಂದು ಅಲ್ಲೇ ಮದುವೆ ಮಾಡಲು ನಿರ್ಧರಿಸಿದರು.

ನಿನ್ನೆ ಬೆಳಗ್ಗೆ 11 ಗಂಟೆಗೆ ವಿವಾಹ ಮುಹೂರ್ತ ನಿಗದಿಯಾಗಿತ್ತು. ಜಿಲ್ಲಾಡಳಿತದ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ವಧು-ವರ ಇಬ್ಬರು ಗಡಿಯಲ್ಲೇ ತಾಳಿ ಕಟ್ಟಲು ತೀರ್ಮಾನಿಸಿದರು. ಕೊನೆಗೆ ಜಿಲ್ಲಾಡಳಿತ ಮಧ್ಯಾಹ್ನ ಬಳಿಕ ಪಾಸ್ ನೀಡಿತು. ಸಂಜೆ ಹೊತ್ತಿಗೆ ವಧುವನ್ನು ಮುಳ್ಳೇರಿಯಾದ ವರನ ಮನೆಗೆ ಕರೆತಂದು ರಾತ್ರಿ ವಿವಾಹ ನೆರವೇರಿಸಲಾಯಿತು. ನಂತರ ವಧುವರರಿಬ್ಬರಿಗೂ ಹೋಮ್​ ಕ್ವಾರಂಟೈನ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.