ಮಂಗಳೂರು: ಕೊರೊನಾ ಭೀತಿ ಹಿನ್ನೆಲೆ ಮಂಗಳೂರಿನಲ್ಲಿ ಇಂದು 156 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-19 ದೃಢಪಟ್ಟಿರುವ ಪ್ರದೇಶದ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕ ಹೊಂದಿದವರ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ ಪರಿಣಾಮ ಈ ಸಂಖ್ಯೆ ಹೆಚ್ಚಾಗಿದೆ.
ಈ ಹಿಂದೆ ಕಳುಹಿಸಲಾದ 12 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 12 ನೆಗೆಟಿವ್ ಬಂದಿದೆ. ಈವರೆಗೆ 468 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 456 ನೆಗೆಟಿವ್ ಬಂದಿದೆ.
ಇಂದು 21 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38.958 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ ನಲ್ಲಿ 1485 ಮಂದಿ ಇದ್ದು, 24 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇದ್ದಾರೆ.
ಇಂದಿಗೆ 4588 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇನ್ನು 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.