ಬಂಟ್ವಾಳ: ತಾಲೂಕಿನಲ್ಲಿ 5 ಕೊರೊನಾ ಪ್ರಕರಣಗಳು ದಾಖಲಾಗಿದ್ದು ಈ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿರುವುದಾಗಿ ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.
ತಾಲೂಕಿನ ಪುರಸಭೆ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕಂಟೈನ್ಮೆಂಟ್ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ಅವಶ್ಯಕ ದಿನಸಿ ಸಾಮಗ್ರಿ ಪೂರೈಸಲಾಗುವುದು ಎಂದಿದ್ದು,ಕುಡಿಯುವ ನೀರಿನ ಸಮಸ್ಯೆ ತಾಲೂಕಿನ ಪರಿಸರದಲ್ಲಿ ಆಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ.ಎಸ್.ಆರ್, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಬಂಟ್ವಾಳ ನಗರ ಠಾಣೆಯ ಉಪನಿರೀಕ್ಷಕ ಅವಿನಾಶ್, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ , ಇಂಜಿನಿಯರ್ ಡೊಮಿನಿಕ್ ಡಿ' ಮೆಲ್ಲೋ ಹಾಗೂ ಪುರಸಭೆಯ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.