ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ನಾಳೆಯಿಂದ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಸಭೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನಡೆಸಿದರು.
ಕೊರೊನಾ ವೈರಾಣುವಿನ ಭೀತಿಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೆ ಯಾವುದೇ ಸೇವೆಗಳನ್ನು ನಡೆಸಲು ಅನುಮತಿ ನೀಡಿಲ್ಲ. ಜೊತೆಗೆ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಶಾಸಕರು ಮನವಿ ಮಾಡಿದರು.
ಶ್ರೀ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಸ್ಯಾನಿಟೈಸರ್ ಸಿಂಪಡಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಮುಖ್ಯಸ್ಥರಾದ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಸೂರ್ಯನಾರಾಯಣ ರಾವ್, ಪವಿತ್ರಪಾಣಿ, ಮಾಧವ ಭಟ್, ಪರಮೇಶ್ವರ ಭಟ್, ರಾಮ್ ಭಟ್, ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಮತ್ತು ಅರ್ಚಕರು ಉಪಸ್ಥಿತರಿದ್ದರು.