ETV Bharat / state

ಮಂಗಳೂರು: ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್​ಟೇಬಲ್ ಹೃದಯಾಘಾತದಿಂದ ಸಾವು - head constable died due to a heart attack on duty

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್​ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

head constable died
ಹೆಡ್ ಕಾನ್ಸ್​ಟೇಬಲ್ ಹೃದಯಾಘಾತದಿಂದ ಸಾವು
author img

By ETV Bharat Karnataka Team

Published : Oct 4, 2023, 10:38 AM IST

ಮಂಗಳೂರು : ಕರ್ತವ್ಯದಲ್ಲಿದ್ದಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೆಡ್ ಕಾನ್ಸ್​ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ವಿಜಯಪುರದ ಸೋಮನಗೌಡ ಚೌಧರಿ (32) ಮೃತರು.

2016 ರ ಬ್ಯಾಚ್‌ನ ಸೋಮನಗೌಡ ಚೌಧರಿ ಮಂಗಳೂರು ಸಿಎಆ‌ರ್ ಕಾನ್ಸ್​ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದರು. ಬಳಿಕ ಹೆಡ್‌ ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದು, ಇದೀಗ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್​ಪೆಕ್ಟರ್‌ರ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು. ಮೂರು ವರ್ಷಗಳ ಹಿಂದೆ ಅವರಿಗೆ ವಿವಾಹವಾಗಿತ್ತು.

ಮಂಗಳವಾರ ಕರ್ತವ್ಯದಲ್ಲಿದ್ದ ಸೋಮನಗೌಡ ಅವರು ನಗರದ ಮಳಿಗೆಯೊಂದಕ್ಕೆ ತೆರಳಿದ್ದರು. ಈ ವೇಳೆ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆಂದು ತಪಾಸಣೆ ನಡೆಸಿದ ವೈದ್ಯರು ತಿಳಿಸಿದ್ದಾರೆಂದು ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್, ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿ ಸಿಬ್ಬಂದಿ ವರ್ಗವು ಸೋಮನಗೌಡ ಅವರ ಮೃತದೇಹಕ್ಕೆ ಅಂತಿಮ ಗೌರವ ಸಲ್ಲಿಸಿ, ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಬಳಿಕ, ಅವರ ತವರು ಜಿಲ್ಲೆ ವಿಜಯಪುರಕ್ಕೆ ಮೃತದೇಹವನ್ನು ಕಳುಹಿಸಿ ಕೊಡಲಾಗಿದೆ.

ಇದನ್ನೂ ಓದಿ : ಡ್ರೈವಿಂಗ್ ವೇಳೆ ಹೃದಯಾಘಾತದಿಂದ ಲಾರಿ ಚಾಲಕ ಸಾವು : ಗೂಡ್ಸ್ ಟೆಂಪೋ, ವಿದ್ಯುತ್ ಕಂಬಕ್ಕೆ ಡಿಕ್ಕಿ

ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತ : ಇನ್ನು ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಿನ್ನೆ ನಡೆದಿತ್ತು. ತಮಿಳುನಾಡು ಮೂಲದ ಸೆಲ್ವರಾಜ್ (50) ಮೃತ ಚಾಲಕ.‌ ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ಲಾರಿ ಚಾಲಕನಿಗೆ ಹೃದಯಾಘಾತವಾಗಿತ್ತು. ಪರಿಣಾಮ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ, ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಬಾಗಲಕೋಟೆ : ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ವಿದ್ಯಾರ್ಥಿಗೆ ಹೃದಯಾಘಾತ : ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಸೆಪ್ಟೆಂಬರ್​ 30 ರಂದು ನಡೆದಿತ್ತು. 9 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ಬಾಲಕ ಅರ್ಧ ವಾರ್ಷಿಕ ಪರೀಕ್ಷೆ ಬರೆಯಲು ಶಾಲೆಗೆ ಹೋದ ವೇಳೆ ಘಟನೆ ಸಂಭವಿಸಿತ್ತು. ರಾಹುಲ್​ ಕೋಲಕಾರ (15) ಮೃತ ವಿದ್ಯಾರ್ಥಿ. ತೀವ್ರವಾಗಿ ನೋವು ಕಾಣಿಸಿಕೊಂಡಾಗ ಶಿಕ್ಷಕರು ಹಾಗೂ ಇತರ ಶಾಲಾ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.