ETV Bharat / state

ಪಾಕ್​ ಪರ ಘೋಷಣೆ ಹಾಕಿದ ವಿಡಿಯೋ ವೈರಲ್: ಎಸ್​ಡಿಪಿಐ ಬೆಂಬಲಿಗರ ವಿರುದ್ಧ ಪ್ರಕರಣ

ರಾಜಕೀಯ ಪಕ್ಷವೊಂದರ ಸದಸ್ಯರು ಪಾಕಿಸ್ತಾನ ಪರ ಘೋಷಣೆ ಹಾಕಿದ್ದಾರೆ ಎಂದು ಹೇಳಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

author img

By

Published : Dec 30, 2020, 5:32 PM IST

Updated : Dec 30, 2020, 5:44 PM IST

ಎಸ್​ಡಿಪಿಐ ಸಂಘಟಣೆಯ ಬೆಂಬಲಿಗರ ವಿರುದ್ಧ ಪ್ರಕರಣ

ಮಂಗಳೂರು: ಮತ ಎಣಿಕೆಯ ವೇಳೆ ಪಕ್ಷವೊಂದರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಹಾಕಿದ್ದಾರೆ ಎಂದು ಹೇಳಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಮತ ಎಣಿಕೆ ಕೇಂದ್ರದ ಮುಂಭಾಗದಲ್ಲಿ ರಾಜಕೀಯ ಪಕ್ಷವೊಂದರ ಸದಸ್ಯರು ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ:ನಾನಿರೋತನಕ ನಂದೇ ಹವಾ; ಸೋದರತ್ತೆಯ ಮುಂದೆ ಸೊಸೆಗೆ ಸೋಲು!

ಈ ಹಿನ್ನೆಲೆಯಲ್ಲಿ ಪ್ರಕಟಣೆ ಹೊರಡಿಸಿರುವ ದ.ಕ ಜಿಲ್ಲಾ ‌ಪೊಲೀಸ್ ವರಿಷ್ಠಾಧಿಕಾರಿ, ಈ ವಿಡಿಯೋವನ್ನು ಪರಿಶೀಲಿಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ಈ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಸಹಕಾರಿಯಾಗುವಂತಹ ಯಾವುದೇ ವಿಡಿಯೋಗಳು ಇದ್ದಲ್ಲಿ ಜಿಲ್ಲಾ ನಿಯಂತ್ರಣ ಕೊಠಡಿಗೆ (9480805300) ನೀಡುವಂತೆ ವಿನಂತಿಸಿದ್ದಾರೆ.

ಇದಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್​ಡಿಪಿಐ ಸಂಘಟಣೆಯ ಸುಮಾರು 10-15 ಜನ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

Last Updated : Dec 30, 2020, 5:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.