ಮಂಗಳೂರು: ನಗರದಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದಿರುವ ಘಟನೆ ತೊಕ್ಕೊಟ್ಟುವಿನ ಅಂಬಿಕಾ ರೋಡ್ನಲ್ಲಿ ನಡೆದಿದೆ. ಚೂರಿ ಇರಿತದಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಾಳುವನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೂರಿ ಇರಿದ ತಂಡ ಪರಾರಿಯಾಗಿದೆ.
ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಈ ವೇಳೆ ಇಬ್ಬರು ಸಾವನ್ನಪ್ಪಿದ್ದರು. ಬಳಿಕ ನಗರದಲ್ಲಿ ಪೊಲೀಸರು ಕರ್ಫ್ಯೂ ಜಾರಿಗೊಳಿಸಿದ್ದರು. ಇದರಿಂದ ಪರಿಸ್ಥಿತಿ ಶಾಂತವಾಗಿತ್ತು. ಇದರ ಬೆನ್ನಲ್ಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.