ETV Bharat / state

ಚಿನ್ನಾಭರಣ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ - two accused arrested in Belthangady

ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್​ ಕಳವು ಮಾಡಿ ಅದರಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ಅಸುಂಡಿ ಗ್ರಾಮದ ನಿವಾಸಿಗಳಾದ ಸಿದ್ಧಾರ್ಥ ಹಾಗೂ ದಾಕ್ಷಾಯಿಣಿ ಬಂಧಿತ ಆರೋಪಿಗಳು.

Belthangady
ಬಂಧಿತ ಆರೋಪಿಗಳು
author img

By

Published : Apr 10, 2021, 7:02 PM IST

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್​ ಕಳವು ಮಾಡಿ ಅದರಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗದಗ ಜಿಲ್ಲೆ ಅಸುಂಡಿ ಗ್ರಾಮದ ನಿವಾಸಿಗಳಾದ ಸಿದ್ಧಾರ್ಥ ಹಾಗೂ ದಾಕ್ಷಾಯಿಣಿ ಬಂಧಿತ ಆರೋಪಿಗಳು. ಏ. 1ರಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಕಲ್ಪನಾ ಎಂಬುವರು ಕುಟುಂಬಸ್ಥರೊಂದಿಗೆ ಧರ್ಮಸ್ಥಳಕ್ಕೆ ಬಂದ ಸಂದರ್ಭದಲ್ಲಿ ಅವರ ತಾಯಿ ಭವಾನಿ ಹಿಡಿದುಕೊಂಡಿದ್ದ ವ್ಯಾನಿಟಿ ಬ್ಯಾಗ್ ಹಾಗೂ ಅದರಲ್ಲಿದ್ದ ಸುಮಾರು 3,20,000 ರೂ. ಮೌಲ್ಯದ 85 ಗ್ರಾಂ ಚಿನ್ನಾಭರಣ ಕಳ್ಳತನವಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವನೆ ನಿರ್ದೇಶನದಂತೆ ಬಂಟ್ವಾಳ ಡಿವೈಎಸ್​ಪಿ ವೆಲೈಂಟಿನ್ ಡಿಸೋಜಾ ಸೂಚನೆಯಂತೆ ಬೆಳ್ತಂಗಡಿ ಸರ್ಕಲ್ ಇನ್ಸ್​ಪೆಕ್ಟರ್ ಸಂದೇಶ್ ಪಿ.‌ಜಿ. ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪಿಎಸ್​ಐ ಪವನ್ ನಾಯಕ್ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರು ಹಾಗೂ 85 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.