ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ಅರಣ್ಯ ಇಲಾಖೆ ಗೋದಾಮಿಗೆ ನಿನ್ನೆ ತಡರಾತ್ರಿ ಕನ್ನ ಹಾಕಿರುವ ಖದೀಮರು, ಮರಗಳವು ನಡೆಸಲು ಯತ್ನಿಸಿ ವಿಫಲರಾಗಿದ್ದಾರೆ. ರಾತ್ರಿ ಕಾವಲು ಕಾಯುತ್ತಿದ್ದ ಅರಣ್ಯ ರಕ್ಷಕ ಇಲಾಖೆಯ ಸಿಬ್ಬಂದಿ ಗೋದಾಮಿನ ಶಟರ್ ತೆರೆದಾಗ ಕಳ್ಳರು ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ಅರಣ್ಯ ಇಲಾಖೆ ಗೋದಾಮಿಗೆ ಮತ್ತೆ ಕನ್ನ: ಮರ ಕಳವಿಗೆ ವಿಫಲ ಯತ್ನ - ಪೊಲೀಸ್ ಠಾಣಾಧಿಕಾರಿ ಕಲೈಮಾರ್ ಪರಿಶೀಲನೆ
ದ.ಕ ಜಿಲ್ಲೆಯ ಬೆಳ್ತಂಗಡಿ ಅರಣ್ಯ ಇಲಾಖೆ ಗೋದಾಮಿಗೆ ನಿನ್ನೆ ತಡರಾತ್ರಿ ಕನ್ನ ಹಾಕಿರುವ ಖದೀಮರು, ಮರಗಳವು ನಡೆಸಲು ಯತ್ನಿಸಿ ವಿಫಲರಾಗಿದ್ದಾರೆ. ರಾತ್ರಿ ಕಾವಲು ಕಾಯುತ್ತಿದ್ದ ಅರಣ್ಯ ರಕ್ಷಕ ಇಲಾಖೆಯ ಸಿಬ್ಬಂದಿ ಗೋದಾಮಿನ ಶಟರ್ ತೆರೆದಾಗ ಕಳ್ಳರು ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ಅರಣ್ಯ ಇಲಾಖೆ ಗೋದಾಮಿಗೆ ಮತ್ತೆ ಕನ್ನ
ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ಅರಣ್ಯ ಇಲಾಖೆ ಗೋದಾಮಿಗೆ ನಿನ್ನೆ ತಡರಾತ್ರಿ ಕನ್ನ ಹಾಕಿರುವ ಖದೀಮರು, ಮರಗಳವು ನಡೆಸಲು ಯತ್ನಿಸಿ ವಿಫಲರಾಗಿದ್ದಾರೆ. ರಾತ್ರಿ ಕಾವಲು ಕಾಯುತ್ತಿದ್ದ ಅರಣ್ಯ ರಕ್ಷಕ ಇಲಾಖೆಯ ಸಿಬ್ಬಂದಿ ಗೋದಾಮಿನ ಶಟರ್ ತೆರೆದಾಗ ಕಳ್ಳರು ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
Intro:ಬೆಳ್ತಂಗಡಿ: ದ.ಕ.ಜಿಲ್ಲೆಯ ಬೆಳ್ತಂಗಡಿ ಅರಣ್ಯ ಇಲಾಖೆ ಗೋದಾಮಿಗೆ ನಿನ್ನೆ ತಡರಾತ್ರಿ ಕನ್ನ ತೋಡಿರುವ ಖದೀಮರು, ಮರಗಳವು ನಡೆಸಲು ವಿಫಲ ಯತ್ನಗೈದಿದ್ದಾರೆ. ರಾತ್ರಿ ಕಾವಲು ಕಾಯುತ್ತಿದ್ದ ಅರಣ್ಯ ರಕ್ಷಕ ಇಲಾಖೆಯ ಸಿಬ್ಬಂದಿ ಗೋದಾಮಿನ ಶಟರ್ ತೆರೆದಾಗ ಕಳ್ಳರು ಓಡಿಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಗೋದಾಮಿನ ಹಿಂಬದಿ ಮನೆಯ ಕಾಂಪೌಂಡ್ ಹಾರಿ ಒಳ ನುಗ್ಗಿದ ಕಳ್ಳರು ಸುಮಾರು 2.30 ರವರೆಗೆ ಗೋಡೆಯಲ್ಲಿ ಕನ್ನ ಕೊರೆದು ಒಳ ನುಗ್ಗಿದ್ದಾರೆ. ಕೊರೆದ ಕೋಣೆಯಲ್ಲಿ ಹಾಲಮಡ್ಡಿ (ದೂಪದ ಮರ) ಮಾತ್ರ ಸಿಕ್ಕಿದ್ದು ಅದನ್ನು ಅಲ್ಲೆ ಬಿಟ್ಟು ಮುಂಭಾಗದಿಂದ ಮತ್ತೊಂದು ಕೋಣೆಯ ಶಟರ್ ತೆರೆಯಲು ಮುಂದಾಗಿದ್ದಾರೆ. ಈ ವೇಳೆ ಶಬ್ದ ಕೇಳಿ ಅರಣ್ಯ ರಕ್ಷಕ ಇಲಾಖೆಯ ಸಿಬ್ಬಂದಿ ಎಚ್ಚರಗೊಂಡಿದ್ದರಿಂದ ಪರಾರಿಯಾಗಿದ್ದಾರೆ.
ಮೇಲ್ನೋಟಕ್ಕೆ ಇಬ್ಬರು ಒಳ ನುಸುಳಿರುವುದು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಮುಸುಕುಧಾರಿ ಇಬ್ಬರು ಸಿಸಿ ಕ್ಯಾಮರಾ ದಿಕ್ಕು ಬದಲಾಯಿಸಿರುವುದು ಮತ್ತೊಂದು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ.
Body:ಕಳೆದ ಜುಲೈ 13ರಂದು ಇದೇ ಗೋದಾಮಿನ ಬೀಗ ಮುರಿದು ಕಳ್ಳರು ನುಸುಳಿ 344 ಕೆ.ಜಿ. ಗಂಧ ಕಳವುಗೈದಿದ್ದರು. ಈ ವೇಳೆ ಸುಮಾರು 54 ಕೆ.ಜಿ.ಯಷ್ಟು ಉಳಿದಿತ್ತು. ಇದರ ಸುಳಿವು ಸಿಕ್ಕಿ ಮತ್ತೆ ಕಳ್ಳತನಕ್ಕೆ ಯತ್ನಿಸಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಕೃತ್ಯ ನಡೆದ ಬಳಿಕ ಗೋದಾಮಿನ ಸುತ್ತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಕಲೈಮಾರ್, ವಲಯ ಅರಣ್ಯ ಅಧಿಕಾರಿ ಸುಬ್ಬಯ್ಯ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Reporter_Vishwanath PanjimogaruConclusion: