ETV Bharat / state

ಸರ್ಕಾರದ ವತಿಯಿಂದಲೇ ಗೋಶಾಲೆ ನಡೆಸಲು‌ ಚಿಂತನೆ: ಪ್ರಭು ಚವ್ಹಾಣ್ - Prabhu B. Chavan, Minister of Animal Husbandry

ಖಾಸಗಿ ಗೋಶಾಲೆಗಳಿಗೂ ಅನುದಾನ ಹೆಚ್ಚು ಮಾಡುವ ಬಗ್ಗೆ ಪ್ರಯತ್ನ ನಡೆಸಲಾಗುತ್ತದೆ. ಗೋಸಾಗಾಟವನ್ನು ಬೆಳಗ್ಗೆ ಮಾತ್ರ ಮಾಡಬೇಕು. ರಾತ್ರಿ ಸಾಗಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕೆಂದು ಪೊಲೀಸರಿಗೆ ‌ಸೂಚಿಸಲಾಗಿದೆ. ಸರ್ಕಾರದ ವತಿಯಿಂದಲೇ ಗೋಶಾಲೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದ್ದಾರೆ.

Prabhu Chauhan
ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್
author img

By

Published : Jan 19, 2021, 8:38 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಹತ್ಯೆಗೆ ಕಡಿವಾಣ ಹಾಕಲು ಸರ್ಕಾರದ ವತಿಯಿಂದಲೇ ಗೋಶಾಲೆ ನಡೆಸಲು ಚಿಂತನೆ ನಡೆಸಲಾಗಿದೆ. ಜಿಲ್ಲಾಧಿಕಾರಿಯವರಿಗೆ ಜಾಗ ನೋಡಲು ತಿಳಿಸಲಾಗಿದ್ದು, ಸರ್ಕಾರದಿಂದ ಆದಷ್ಟು ಬೇಗ ಇದಕ್ಕಾಗಿ ಅನುದಾನ ವಿನಿಯೋಗಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು.

ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಗೋಶಾಲೆಗಳಿಗೂ ಅನುದಾನ ಹೆಚ್ಚು ಮಾಡುವ ಬಗ್ಗೆ ಪ್ರಯತ್ನ ನಡೆಸಲಾಗುತ್ತದೆ. ಗೋ ಸಾಗಾಟವನ್ನು ಬೆಳಗ್ಗೆ ಮಾತ್ರ ಮಾಡಬೇಕು. ರಾತ್ರಿ ಸಾಗಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕೆಂದು ಪೊಲೀಸರಿಗೆ ‌ಸೂಚಿಸಲಾಗಿದೆ. ಅಲ್ಲದೆ ಇನ್ಮುಂದೆ ಯಾವುದೇ ಜಾನುವಾರು ಕಸಾಯಿಖಾನೆ ಸೇರಬಾರದು. ಒಂದು ವೇಳೆ ಅಕ್ರಮವಾಗಿ ಜಾನುವಾರು ‌ಕಸಾಯಿಖಾನೆಗೆ ಹೋದಲ್ಲಿ ಜಿಲ್ಲಾ ಪಶುಸಂಗೋಪನಾ ಉಪನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ ಅವರ ಮೇಲೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪಶುವೈದ್ಯಾಧಿಕಾರಿಗಳು ಜಾನುವಾರು ತಪಾಸಣೆಗೆ ಬರುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಇದನ್ನು ಸರಿಪಡಿಸಲು ಸೂಚಿಸಲಾಗಿದೆ. ಇದು ಮುಂದುವರಿದಲ್ಲಿ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ‌. ಜಿಲ್ಲೆಯಲ್ಲಿ ಎಲ್ಲಿಯಾದರೂ ಅಕ್ರಮ ಗೋಸಾಗಾಟ ಕಂಡು ಬಂದಲ್ಲಿ ತಕ್ಷಣ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ, ಗೋಸಾಗಾಟ ಮಾಡಿರುವ ವಾಹನವನ್ನು ವಶಕ್ಕೆ ತೆಗೆದುಕೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಎಲ್ಲಿಯೂ ಹಕ್ಕಿ ಜ್ವರದ ಲಕ್ಷಣ ಯಾರಲ್ಲೂ ಕಂಡು ಬಂದಿಲ್ಲ. ಮುಂದೆ ಈ ಜ್ವರ ಕಾಣಿಸಿಕೊಂಡಲ್ಲಿ‌ ನಿಯಂತ್ರಣ ಮಾಡಬೇಕೆಂದು ವೈದ್ಯಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ‌ ಎಂದು‌ ಸಚಿವರು ಸೂಚಿಸಿದರು.

ಓದಿ:ನಾನೊಬ್ಬ ಕೂಲಿ ಕಾರ್ಮಿಕನ ಮಗ, ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯಲ್ಲ..

ಸೋಮವಾರದಿಂದ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಾಗಿದ್ದು, ಇದೀಗ ದಂಡದ ಪ್ರಮಾಣವನ್ನು ಹೆಚ್ಚು ಮಾಡಲಾಗಿದೆ. ಹಿಂದೆ 3 ಸಾವಿರ ರೂ‌. ಇದ್ದದ್ದನ್ನು‌ ಈಗ 50ಸಾವಿರ ರೂ. ನಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಮತ್ತೊಮ್ಮೆ ಅಪರಾಧ ಮಾಡಿದರೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಹಿಂದೆ 6 ತಿಂಗಳಿದ್ದ ಜೈಲು‌ಶಿಕ್ಷೆಯನ್ನು 3 ವರ್ಷಕ್ಕೆ ಏರಿಸಲಾಗಿದೆ. ಈ ಕಾಯ್ದೆಯ ಮೂಲಕ ಗೋಹತ್ಯೆ ವಿಚಾರಣೆಗೆ ವಿಶೇಷ ನ್ಯಾಯಾಲಯ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು‌ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದರು.

ರಾಜ್ಯದ ಪಶುಸಂಗೋಪನಾ ಇಲಾಖೆಯಲ್ಲಿ 3 ಕೋಟಿ ಜಾನುವಾರುಗಳಿದ್ದು, 6 ಕೋಟಿ ಕೋಳಿಗಳಿವೆ‌. 1.15 ಕೋಟಿ ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕೆ ನೀಡಲಾಗಿದೆ. ಅದೇ ರೀತಿ ಲಂಪಿ ರೋಗವನ್ನು ನಿಯಂತ್ರಣ ಮಾಡಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಹಾಲು ಉತ್ಪಾದನೆಗೆ ರೈತರಿಗೆ 5ರೂ. ಸಬ್ಸಿಡಿ ನೀಡಲಾಗುತ್ತಿದೆ. ಇಲ್ಲಿಯವರೆಗೆ ಸುಮಾರು 12 ಕೋಟಿ ರೂ. ಸಬ್ಸಿಡಿ ನೀಡಲಾಗಿದೆ‌. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದೆ ಎಂದು‌ ಸಚಿವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.