ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಳಚ್ಚಿಲ್ ಬಳಿ ಕೋಡಿಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮಳೆ ಅವಾಂತರಕ್ಕೆ ದಕ್ಷಿಣ ಕನ್ನಡದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ.
ಇಲ್ಲಿನ ವಳಚ್ಚಿಲ್ ಕೇಂದ್ರ ಜುಮ್ಮಾ ಮಸೀದಿಯ ಸಹಾಯಕ, ಉಪ್ಪಿನಂಗಡಿ ನಿವಾಸಿ ಅಬ್ದುಲ್ ರಜಾಕ್(45) ಕಾಲುಜಾರಿ ಕೋಡಿಗೆ ಬಿದ್ದು ಮೃತಪಟ್ಟಿದ್ದಾನೆ. ಶನಿವಾರ ಬೆಳಗ್ಗೆ ಮಸೀದಿಗೆ ಉಪಾಹಾರ ತರಲು ತೆರಳಿದ್ದ ವೇಳೆ ಕೋಡಿ ನೀರಿಗೆ ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ. ಪಡೀಲ್ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದಾನೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.