ETV Bharat / state

ಖಾಸಗಿ ಮಾಹಿತಿ ಬಹಿರಂಗಪಡಿಸುವುದಾಗಿ ಉದ್ಯಮಿಗೆ ಬೆದರಿಕೆ: ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಬಂಧನ - Hindu Mahasabha state president arrested

ಕಾವೂರು ನಿವಾಸಿ ಸುರೇಶ್ ಎಂಬವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇಲೆ ತನಿಖೆ ನಡೆಸಿದ ಪೊಲೀಸರು, ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷರನ್ನು ಬಂಧಿಸಿದ್ದಾರೆ.

Hindu Mahasabha President Rajesh Pavithran
ಹಿಂದೂ ಮಹಾ ಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್
author img

By

Published : Dec 15, 2022, 6:56 AM IST

ಮಂಗಳೂರು: ಉದ್ಯಮಿಯೊಬ್ಬರಿಗೆ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್(42) ಅವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ನಗರದ ಕಾವೂರು ನಿವಾಸಿ ಸುರೇಶ್ ಎಂಬುವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇಲೆ ಪೊಲೀಸರು ತನಿಖೆ ನಡೆಸಿ, ರಾಜೇಶ್ ಪವಿತ್ರನ್ ಬಂಧಿಸಿದ್ದಾರೆ. ಆರೋಪಿ ರಾಜೇಶ್ ಪವಿತ್ರನ್ ಜೊತೆ ಸುರೇಶ್ ಎಂಬವರು ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ, ರಾಜೇಶ್ ಪವಿತ್ರನ್ ಅವ್ಯವಹಾರಗಳು ಇವರ ಗಮನಕ್ಕೆ ಬಂದ ಕಾರಣ ಪಾಲುದಾರಿಕೆಯಿಂದ ಅವರು ಹಿಂದೆ ಸರಿದಿದ್ದರು.

ಇದರಿಂದ ಆಕ್ರೋಶಗೊಂಡ ಆರೋಪಿಯು, ಸುರೇಶ್ ಅವರ ಲ್ಯಾಪ್​ಟಾಪ್ ವಶಕ್ಕೆ ಪಡೆದು ಹೆಚ್ಚುವರಿ ಹಣ, ಚಿನ್ನ ನೀಡಬೇಕು, ಇಲ್ಲದಿದ್ದಲ್ಲಿ ಲ್ಯಾಪ್ ಟಾಪ್​ನಲ್ಲಿರುವ ಎಲ್ಲಾ ಖಾಸಗಿ ಮಾಹಿತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಜೊತೆಗೆ ಕೈ, ಕಾಲು ಕಡಿದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸುರೇಶ್ ದೂರು ನೀಡಿದ್ದರು.

ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾಜೇಶ್ ಪವಿತ್ರನ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಲ್ಲದೆ, ಆರೋಪಿಗೆ ನೆರವು ನೀಡಿದ ಆರೋಪದಲ್ಲಿ ಡಾ.ಸನಿಜ ಎಂಬುವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಶಾಸಕರ ಬಲಗೈ ಬಂಟರಿಂದ ನನಗೆ ಕೊಲೆ ಬೆದರಿಕೆ : ಮಣಿಕಂಠ ರಾಠೋಡ್ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.