ETV Bharat / state

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ : ದೂರು ದಾಖಲು - ಈಟಿವಿ ಭಾರತ ಕನ್ನಡ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

threatening-call-from-unknown-person-to-the-dakshina-kannada-d-c
ದ.ಕ.ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ : ದೂರು ದಾಖಲು
author img

By

Published : Apr 23, 2023, 6:33 PM IST

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್. ಅವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಪ್ರಿಲ್ 20ರ ಮಧ್ಯಾಹ್ನ 2.28ರ ಸುಮಾರಿಗೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಮ್ಮ ಕಚೇರಿಯಲ್ಲಿ ಚುನಾವಣಾ ವೀಕ್ಷಕರೊಂದಿಗೆ ಸಭೆಯನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೊಬೈಲ್ ಗೆ 7353998242 ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದೆ. ಜಿಲ್ಲಾಧಿಕಾರಿಯವರು ಕರೆ ಸ್ವೀಕರಿಸಿದ್ದು, ಈ ವೇಳೆ ಅಪರಿಚಿತ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ತಿಳಿದುಬಂದಿದೆ.

ಅಲ್ಲದೆ ಜಿಲ್ಲಾಧಿಕಾರಿಯವರನ್ನು ಉದ್ದೇಶಿಸಿ, ತಕ್ಷಣ ಓರ್ವ ಕೆಎಂಎಫ್ ಸಿಬ್ಬಂದಿಯನ್ನು ಮಂಗಳೂರಿನಿಂದ ತುಮಕೂರಿಗೆ ಕಳುಹಿಸಿಕೊಡಬೇಕು ಎಂದು ಬೆದರಿಕೆಯನ್ನು ಒಡ್ಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ : ಸಂಬಂಧಿಕರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕುಟುಂಬಕ್ಕೆ ಎದುರಾದ ಜವರಾಯ: ಪತಿ, ಪತ್ನಿ ಮತ್ತು ಮೂವರು ಮಕ್ಕಳು ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.