ಮಂಗಳೂರು: ಮಂಗಳೂರಿನ ವಿವಿಧೆಡೆ ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಹೊರವಲಯದ ಮಂಜನಾಡಿಯ ನಾಟೆಕಲ್ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಜುಲ್ಪಿ ಎಂಬಾತನನ್ನು ಬಂಧಿಸಲಾಗಿದೆ. ಈತನನ್ನು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಇದಲ್ಲದೇ ಮಂಗಳೂರಿನ ಕೂಳೂರಿನಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆಕರ್ಷ್.ಕೆ ಮತ್ತು ಪ್ರಮಿತ್.ಡಿ ಬಂಧಿತ ಯುವಕರಾಗಿದ್ದು, ಇಬ್ಬರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಂಗಾರ್ ಪಲ್ಕೆ ದುರಂತ.. 22 ದಿನದ ನಂತರ ವಿದ್ಯಾರ್ಥಿಯ ಮೃತದೇಹ ಪತ್ತೆ..