ನೆಲ್ಯಾಡಿ (ದಕ್ಷಿಣ ಕನ್ನಡ) : ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಕೆಟ್ಟು ನಿಂತ ಲಾರಿಯೊಂದರ ದುರಸ್ತಿ ಕೆಲಸದಲ್ಲಿ ನಿರತರಾಗಿದ್ದವರಿಗೆ ಪಿಕಪ್ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಬೆದ್ರೋಡಿ ಬಸ್ ನಿಲ್ದಾಣದ ಬಳಿ ಲಾರಿಯೊಂದು ಕೆಟ್ಟು ನಿಂತಿದೆ. ಇದರ ದುರಸ್ತಿ ಕೆಲಸ ನಡೆಯುತ್ತಿತ್ತು. ಈ ವೇಳೆ ಉಪ್ಪಿನಂಗಡಿ ಕಡೆಯಿಂದ ಬಂದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಗುದ್ದಿ, ಬಳಿಕ ವಾಹನ ದುರಸ್ತಿಯಲ್ಲಿ ನಿರತರಾಗಿದ್ದ ಮೂವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಮೃತಪಟ್ಟವರು ಬೆಂಗಳೂರು ಮತ್ತು ಶಿವಮೊಗ್ಗ ಮೂಲದ ಮೆಕ್ಯಾನಿಕ್ಗಳು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 6 ರಿಂದ 8ರವರೆಗಿನ ತರಗತಿಗಳು ಆರಂಭ ; 9ನೇ ತರಗತಿಯಿಂದ ಇದ್ದ ಎಸ್ಒಪಿಯನ್ನೇ ಪಾಲನೆ ಮಾಡಲು ನಿರ್ಧಾರ