ETV Bharat / state

ದ.ಕನ್ನಡದಲ್ಲಿ ಮತ್ತೆ ಮೂವರು ಕೊರೊನಾಗೆ ಬಲಿ : ಸಾವಿನ ಸಂಖ್ಯೆ 28ಕ್ಕೆ ಏರಿಕೆ - corona patients dead in dakshina kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಬ್ಬರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ.

three more corona patients dead in dakshina kannada
ದ.ಕ.ದಲ್ಲಿ ಮತ್ತೆ ಮೂವರು ಕೊರೊನಾಗೆ ಬಲಿ
author img

By

Published : Jul 8, 2020, 9:27 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ.

ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಜೂನ್​ 22ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಉಳ್ಳಾಲದ 57 ವರ್ಷದ ಮಹಿಳೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರಿಗೆ ಹೈಪರ್ ಟೆನ್ಷನ್​, ಡಯಾಬಿಟಿಸ್, ಲಿವರ್ ಸಮಸ್ಯೆ, ಹೃದಯ ಸಮಸ್ಯೆ ಇತ್ತು.

ಹಾಗೆಯೇ ಪುತ್ತೂರಿನ 32 ವರ್ಷದ ಮಹಿಳೆಯೂ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಐಸಿಯುವಿನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ 60 ವರ್ಷದ ವ್ಯಕ್ತಿ ಸಾವನ್ಬಪ್ಪಿದ್ದಾರೆ. ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಒಟ್ಟಾರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.