ETV Bharat / state

ಬಂಟ್ವಾಳ ಸಮೀಪ ಎರಡು ಗುಂಪುಗಳ ನಡುವೆ ಗಲಾಟೆ: ಮೂವರಿಗೆ ಚೂರಿ ಇರಿತ

ಬಂಟ್ವಾಳ ಸಮೀಪ ಎರಡು ಗುಂಪುಗಳ ನಡುವೆ ನಿನ್ನೆ ಗಲಾಟೆ ನಡೆದಿದ್ದು, ಈ ವೇಳೆ ಮೂವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ.

ಬಂಟ್ವಾಳ ಸಮೀಪ ಮೂವರಿಗೆ ಚಾಕು ಇರಿತ
ಬಂಟ್ವಾಳ ಸಮೀಪ ಮೂವರಿಗೆ ಚಾಕು ಇರಿತ
author img

By ETV Bharat Karnataka Team

Published : Oct 27, 2023, 11:39 AM IST

ಬಂಟ್ವಾಳ: ತಾಲೂಕಿನ ಮೆಲ್ಕಾರ್ ಎಂಬಲ್ಲಿ ಎರಡು ತಂಡಗಳ ನಡುವಿನ ಘರ್ಷಣೆ ಬಳಿಕ ಚೂರಿ ಇರಿತದಿಂದ ಮೂವರು ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ (ಗುರುವಾರ) ನಡೆದಿದೆ. ಮೆಲ್ಕಾರ್​ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೇ ಚೂರಿಯಿಂದ ಇರಿದಿದ್ದಾರೆ ಎಂದು ಅವರು ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಗೆ ಕಾರಣವೇನು?: ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತದವರೆಗೆ ಮುಂದುವರಿದಿದೆ. ಕೆಲವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದೆ.

ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಶಾರದಾ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಇದರ ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್​ ನಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾಗಿದೆ.

ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸ್​ ಬಂಟ್ವಾಳ ನಗರ ಪೊಲೀಸ್​ ಠಾಣೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅಕ್ರಮವಾಗಿ ಮನೆ ಪ್ರವೇಶಿಸಿ ಮಲಗಿದ್ದ ಮಹಿಳೆಗೆ ಕಿರುಕುಳ, ಆರೋಪಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.