ಮಂಗಳೂರು: ಇಲ್ಲಿನ ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ನಿಂದ ಮೂವರು ವಿದ್ಯಾರ್ಥಿನಿಯರು ಪರಾರಿಯಾಗಿರುವ ಘಟನೆ ನಡೆದಿದೆ. ನಗರದ ಮೇರಿಹಿಲ್ ಏರ್ಪೋರ್ಟ್ ರಸ್ತೆಯಲ್ಲಿ ಈ ಕಾಲೇಜ್ ಇದ್ದು, ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿ ಮುರಿದಿದ್ದಾರೆ.
ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. "ನಾವು ಹೋಗುತ್ತಿದ್ದೇವೆ, ಕ್ಷಮಿಸಿ" ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ.
ಕಂಕನಾಡಿ ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಂಗಳೂರು: ಸಮಾಜಸೇವೆ ಹೆಸರಿನಲ್ಲಿ ಅಪರಾಧ ಕೃತ್ಯ; ಆರೋಪಿಯ ಬಂಧನ!