ಸುಳ್ಯ: ತಾಲೂಕಿನಲ್ಲಿ ಮೂವರು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಶಿಕ್ಷಕರು ಬೋಧನೆ ಮಾಡುತ್ತಿದ್ದ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಶಾಲೆ ಪುನಾರಂಭ ಹಿನ್ನೆಲೆ ಶಿಕ್ಷಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, ಈ ವೇಳೆ ಮೂವರು ಶಿಕ್ಷಕರ ವರದಿ ಪಾಸಿಟಿವ್ ಬಂದಿದೆ. ಸುಳ್ಯ ವ್ಯಾಪ್ತಿಯ ಸುಬ್ರಹ್ಮಣ್ಯ ಮತ್ತು ಬಳ್ಪ ಗ್ರಾಮದ ಮೂವರು ಶಿಕ್ಷಕರಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೇಳಿದರು.
ಓದಿ : ಚಿಕ್ಕಮಗಳೂರಿನಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢ: ಡಿಸಿ ಸ್ಪಷ್ಟನೆ
ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕಿತ ಶಿಕ್ಷರು ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿಕ್ಷಕರು ಬೋಧಿಸುತ್ತಿದ್ದ ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಿಸುವಂತೆ ಮತ್ತು ಶಿಕ್ಷಕರಿಗೆ ಕ್ವಾರಂಟೈನ್ಗೆ ಒಳಪಡಿಸುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.