ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆ ಮಂಗಳೂರಿನಲ್ಲಿ ಇಂದು 18 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ಹಿಂದೆ ಕಳುಹಿಸಲಾದ 26 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಈವರೆಗೆ 457 ವ್ಯಕ್ತಿಗಳ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 445 ನೆಗೆಟಿವ್ ಬಂದಿವೆ. ಇಂದು 72 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,937 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.
ಹೋಮ್ ಕ್ವಾರಂಟೈನ್ನಲ್ಲಿ 1,731 ಮಂದಿ ಇದ್ದು, 24 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 4,342 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇನ್ನು ನಾಲ್ಕು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.