ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆ ಮಂಗಳೂರಿನಲ್ಲಿ ಇಂದು 24 ಶಂಕಿತರ ಗಂಟಲು ದ್ರವ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಲಾದ 113 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
![24 suspects today in mangalore](https://etvbharatimages.akamaized.net/etvbharat/prod-images/kn-mng-02-covid-report-16-photo-7202146_16042020191041_1604f_1587044441_882.png)
ಈವರೆಗೆ ಜಿಲ್ಲೆಯಲ್ಲಿ 623 ಶಂಕಿತರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 611 ನೆಗೆಟಿವ್ ಬಂದಿದೆ. ಒಟ್ಟು 39,032 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಹೋಂ ಕ್ವಾರಂಟೈನ್ನಲ್ಲಿ 797 ಮಂದಿ ಇದ್ದು, 10 ಮಂದಿ ಇಎಸ್ಐ ಆಸ್ಪತ್ರೆ ಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ.
![24 suspects today in mangalore](https://etvbharatimages.akamaized.net/etvbharat/prod-images/kn-mng-02-covid-report-photo-update-7202146_16042020193143_1604f_1587045703_490.jpg)
ಇಂದಿಗೆ 5,276 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ವಾಪಾಸಾಗಿದ್ದು, ಇನ್ನು 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.