ETV Bharat / state

ಬೆಳ್ತಂಗಡಿಯ ಕುತ್ಲೂರಿನಲ್ಲಿ ಹುಲಿ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ - Tiger found in Beltangadi taluk

ಬೆಳ್ತಂಗಡಿ ತಾಲೂಕಿನಲ್ಲಿ ಹುಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

Tiger
Tiger
author img

By

Published : Oct 18, 2020, 5:08 PM IST

ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಎಂಬಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಮನೆ ಮಾಡಿದೆ.

ಈ ಕುರಿತು ಪ್ರತ್ಯಕ್ಷದರ್ಶಿ ರವಿ ಪೂಜಾರಿ ಎಂಬುವವರು ಮಾಹಿತಿ ನೀಡಿದ್ದು, ವೇಣೂರು– ನಾರಾವಿ ರಸ್ತೆಯಲ್ಲಿ ನಿನ್ನೆ ರಾತ್ರಿ ನಾನು ಬೈಕ್‌ನಲ್ಲಿ ಸಾಗುತ್ತಿದ್ದಾಗ ಹುಲಿ ಕಾಣಿಸಿಕೊಂಡಿತ್ತು. ಸ್ವಲ್ಪ ಹೊತ್ತು ರಸ್ತೆಯಲ್ಲೇ ಇದ್ದ ಹುಲಿ ನಂತರ ಪೊದೆಯತ್ತ ಸಾಗಿದೆ ಎಂದು ಹೇಳಿದರು.

ಬಜಿಲಪಾದೆಯ ಸುತ್ತಮುತ್ತ ಎರಡು ವಾರಗಳ ಅಂತರದಲ್ಲಿ ನಾನು ಮೂರು ಬಾರಿ ಹುಲಿ ನೋಡಿದ್ದೇನೆ. ವಾರದ ಹಿಂದೆ ಗೂಡಂಗಡಿಯೊಂದರ ಹತ್ತಿರ ಕಾಣಿಸಿಕೊಂಡಿತ್ತು ಎಂದು ಮತ್ತೊಬ್ಬರು ಪ್ರತ್ಯಕ್ಷದರ್ಶಿ ಪ್ರಭಾಕರ ಪೂಜಾರಿ ಹೇಳಿದ್ದಾರೆ.

ಗ್ರಾಮಸ್ಥರಲ್ಲಿ ಆತಂಕ:

ಗ್ರಾಮದಲ್ಲಿ ಕೆಲವು ನಾಯಿಗಳು ನಾಪತ್ತೆಯಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ. ‌ಅರಣ್ಯ ಇಲಾಖೆಯವರು ತಕ್ಷಣ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕು ಎಂದು ಗ್ರಾಮದ ಜನತೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.