ಮಂಗಳೂರು: ಕೊರೊನಾ ಶಂಕೆಯ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು 170 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 581 ಮಂದಿಯ ಗಂಟಲು ದ್ರವದ ವರದಿ ಬಂದಿದ್ದು, ಅದರಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. 593 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 11 ಮಂದಿ ನಿಗಾದಲ್ಲಿದ್ದಾರೆ. 28 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ನಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, 18 ಮಂದಿಯನ್ನು ಸುರತ್ಕಲ್ನ ಎನ್ಐಟಿಕೆಯಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
ಇನ್ನು ವೆನ್ಲಾಕ್ ಆಸ್ಪತ್ರೆಯ ಕ್ವಾರೆಂಟೈನ್ನಲ್ಲಿ ಯಾರೂ ಇಲ್ಲ. 6,073 ಮಂದಿ 28 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 72 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ನಗರದಲ್ಲಿ ಈವರೆಗೆ 42,469 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.
ಹಾಗೆಯೇ ಈವರೆಗೆ 8,856 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಈವರೆಗೆ 8,263 ಮಂದಿಯ ವರದಿ ಬಂದಿದೆ. ಅದರಲ್ಲಿ 8,158 ಮಂದಿಯ ವರದಿಯಲ್ಲಿ ನೆಗೆಟಿವ್ ಬಂದಿದೆ. 105 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 39 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಇನ್ನು 59 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 7 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.