ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ -19 ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ.
ನಿನ್ನೆ ಪ್ರಯೋಗಾಲಯಕ್ಕೆ ಕಳುಹಿಸಲಾದ 10 ವರದಿಗಳು ನೆಗೆಟಿವ್ ಬಂದಿವೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಇಂದು 7 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈವರೆಗೆ 341 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 329 ನೆಗೆಟಿವ್ ಬಂದಿವೆ.
ಇಂದು 49 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,701 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ನಲ್ಲಿ 3,930 ಮಂದಿ ಇದ್ದು, 10 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 1,989 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಎಂಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.