ETV Bharat / state

ಕಾರು ಚಲಾಯಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ:ವೈದ್ಯೆಯ ಸಮಯ ಪ್ರಜ್ಞೆಯಿಂದ ಬದುಕಿತು ಜೀವ ! - A man driving a car has a heart attack

ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತ ಸಂಭವಿಸಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

tokkottu-a-man-driving-a-car-has-a-heart-attack
ತೊಕ್ಕೊಟ್ಟು
author img

By

Published : Jan 15, 2021, 11:16 PM IST

ಉಳ್ಳಾಲ: ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆಯಲ್ಲೇ ವ್ಯಕ್ತಿಯೋರ್ವರಿಗೆ ಹೃದಯಾಘಾತ ಆಗಿರುವ ಘಟನೆ ತೊಕ್ಕೊಟ್ಟು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪಿನಲ್ಲಿ ನಡೆದಿದೆ.

ಪುತ್ತೂರು ಮೂಲದ ಅಭಿಷೇಕ್ (43) ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ. ಅಭಿಷೇಕ್ ಕುಟುಂಬದವರೊಂದಿಗೆ ಕಲ್ಲಾಪಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮಹಿಳಾ ವೈದ್ಯೆ, ಅಭಿಷೇಕ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯಿಂದ ಕಲ್ಲಾಪು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು, ಉಳ್ಳಾಲ ಮತ್ತು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಓದಿ: ಗಂಡ ಹೆಂಡ್ತಿ ಜಗಳ : ದೂರು ವಿಚಾರಣೆಗೆ ಹೋದ ಪೊಲೀಸರ ಮೇಲೆ ಹಲ್ಲೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.